ಉತ್ತರ ಕನಾ೯ಟಕ ಹೆಬ್ಬಾಗಿಲಾದ ಹುಬ್ಬಳ್ಳಿಯಲ್ಲಿ ಇಂದು ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡುವುದಕ್ಕಾಗಿ ಪ್ರಾರಂಭಿಸಿರುವ ಸಮುತ್ಕರ್ಷ ಕಚೇರಿ ಮತ್ತು ಅಧ್ಯಯನ ಕೇಂದ್ರವನ್ನು ಉದ್ಘಾಟಿಸಲಾಯಿತು. ಬೆಳಗಾವಿಯ ರಾಮಕೃಷ್ಣ ಆಶ್ರಮದ ಶ್ರೀ ಸತ್ವಸ್ತಾನಂದ ಸ್ವಾಮೀಜಿ,ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ, ನಿವೃತ್ತ ಐಪಿಎಸ್ ಅಧಿಕಾರಿ ಡಾ. ಎಂ.ಎನ್. ಕೃಷ್ಣಮೂರ್ತಿ , ಕೆಎಲ್‌ಇ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ್ , ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಉಪಸ್ಥಿತರಿದ್ದರು. ಸಮುತ್ಕರ್ಷ ಟ್ರಸ್ಟ್ ನ ಕಾರ್ಯದರ್ಶಿ ಜಿತೇಂದ್ರ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.

 

ದೆಹಲಿಯ ಸಂಕಲ್ಪ ಐಎಎಸ್ ಸಹಯೋಗದೊಂದಿಗೆ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆಗಳ ಕುರಿತು ತರಬೇತಿ ನೀಡುತ್ತಿರುವ ಸಮುತ್ಕರ್ಷ ,ತನ್ನ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ. 6ನೇ ತರಗತಿ ವಿದ್ಯಾರ್ಥಿಗಳಿಂದ ಸಿವಿಲ್ ಸರ್ವಿಸಸ್‌ಗೆ ಅಧ್ಯಯನ ಮಾಡುವವರಿಗೆ ಹಾಗೂ ಪೋಷಕರಿಗೂ ಮಾರ್ಗದರ್ಶನ ಮಾಡಲಾಗುತ್ತಿದೆ.