ಬೆಂಗಳೂರು: ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಸ್ವದೇಶಿ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಜನಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೋತ್ಥಾನ ಪರಿಷತ್ ಸೆ. 9 ರಿಂದ 24 ರವರೆಗೆ ರಾಜ್ಯಾದ್ಯಂತ ರಾಷ್ಟ್ರೀಯ ಸ್ವದೇಶಿ ಸುರಕ್ಷಾ ಅಭಿಯಾನ ಹಮ್ಮಿಕೊಂಡಿದೆ.

1965ರಲ್ಲಿ ಪ್ರಾರಂಭಗೊಂಡ ರಾಷ್ಟ್ರೋತ್ಥಾನ ಪರಿಷತ್, ಒಂದು ನೋಂದಾಯಿತ ಸ್ವಯಂಸೇವಾ ಸಂಸ್ಥೆಯಾಗಿದೆ. ಶಿಕ್ಷಣ ಸಂಸ್ಥೆಗಳು, ರಾಷ್ಟ್ರೋತ್ಥಾನ ಬಳಗ, ಯೋಗಕೇಂದ್ರಗಳು, ಸೇವಾಬಸ್ತಿಗಳ(ಸ್ಲಂ) ಕಾರ್ಯ ಸೇರಿದಂತೆ ಸಮಾಜವನ್ನು ಪ್ರಭಾವಿಸುವ ಅನೇಕ ಕ್ಷೇತ್ರಗಳ ಮೂಲಕ ರಾಷ್ಟ್ರೋತ್ಥಾನ ಪರಿಷತ್ ರಾಜ್ಯಾದ್ಯಂತ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಇವುಗಳನ್ನು ಕೇಂದ್ರವಾಗಿಸಿಕೊಂಡು ರಾಜ್ಯಾದ್ಯಂತ ಈ ಅಭಿಯಾನವನ್ನು ನಡೆಸಲು ನಿರ್ಧರಿಸಿದೆ.

ಈ ಅಭಿಯಾನದಲ್ಲಿ ರಾಜ್ಯದಾದ್ಯಂತ ಹಬ್ಬಿರುವ ರಾಷ್ಟ್ರೋತ್ಥಾನದ 30ಕ್ಕೂ ಅಧಿಕ ಶಾಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಹಾಗೂ ಜನರಲ್ಲಿ ಸ್ವದೇಶಿ ವಸ್ತುಗಳನ್ನು ಬಳಸುವಂತೆ ಜಾಗೃತಿ ಮೂಡಿಸುವ ಬೃಹತ್ ಜಾಗೃತಿ ನಡಿಗೆಗಳು, ಬೈಕ್ ರ್ಯಾಲಿ, ಪಂಜಿನ ಮೆರವಣಿಗೆ, ಸಹಿಸಂಗ್ರಹ ಅಭಿಯಾನ, ಮನೆಮನೆ ಸಂಪರ್ಕ, ವಿಚಾರ ಸಂಕಿರಣ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ. ರಾಷ್ಟ್ರೋತ್ಥಾನ ಶಾಲೆಗಳ ಒಟ್ಟು 20 ಸಾವಿರ ವಿದ್ಯಾಥರ್ಿಗಳು, ಪೋಷಕರು ಹಾಗೂ ರಾಷ್ಟ್ರೋತ್ಥಾನ ನಡೆಸುತ್ತಿರುವ ವಿವಿಧ ಚಟುವಟಿಕೆಗಳ ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ 2 ಲಕ್ಷಕ್ಕೂ ಅಧಿಕ ಮಂದಿ ಈ ಅಭಿಯಾನಗಳಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 5 ಲಕ್ಷಕ್ಕೂ ಅಧಿಕ ಮನೆಗಳ ಸಂಪರ್ಕ ಮಾಡಲಾಗುವುದು ಹಾಗೂ ಸಹಿಸಂಗ್ರಹ ಅಭಿಯಾನದಲ್ಲಿ ಸುಮಾರು ಕೋಟಿ ಸಹಿಸಂಗ್ರಹಿಸಲು ನಿಶ್ಚಯಿಸಲಾಗಿದೆ.

ಸೆಪ್ಟೆಂಬರ್ 9ರಂದು ಬೆಂಗಳೂರಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಯಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಬ್ಬಿರುವ ರಾಷ್ಟ್ರೋತ್ಥಾನ ಪರಿಷತ್ ನ ವಿವಿಧ ಚಟುವಟಿಕೆಗಳ ಮೂಲಕ ಸೆ. 24ರ ವರೆಗೆ ಈ ಅಭಿಯಾನ ನಡೆಯಲಿದೆ. ಚಿತ್ರರಂಗದ ಗಣ್ಯರು, ಸಮಾಜಸೇವಕರು ಸೇರಿದಂತೆ ವಿವಿಧಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಪ್ರಮುಖರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಆ ಪ್ರಯುಕ್ತ ಬೆಂಗಳೂರು ಕೇಂದ್ರಿತವಾಗಿ ಹಮ್ಮಿಕೊಂಡ ಕಾರ್ಯಕ್ರಮಗಳು

  1. ಜಾಗೃತಿ ನಡಿಗೆ
  2. ಬೈಕ್ ರ್ಯಾಲಿ
  3. ಪಂಜಿನ ಮೆರವಣಿಗೆ
  4. ಮನೆಮನೆ ಸಂಪರ್ಕ – ಸೆಪ್ಟೆಂಬರ್ 9 ರಿಂದ ಪ್ರಾರಂಭ
  5. ಸಹಿಸಂಗ್ರಹ ಅಭಿಯಾನ – ಸೆಪ್ಟೆಂಬರ್ 9 ರಿಂದ ಪ್ರಾರಂಭ