ಮೈಸೂರು, ನವೆಂಬರ್ 2,2018: ಸಂಸ್ಕಾರ ಭಾರತಿ ಮೈಸೂರು ಮತ್ತು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವ ಸಂಗೀತೋತ್ಸವನ್ನು ನವೆಂಬರ್ 1 ರಿಂದ 4 ವರೆಗೆ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮವನ್ನು ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಊದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅವಧೂತ ದತ್ತ ಪೀಠ, ಮೈಸೂರಿನ ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಪೂಜ್ಯ ಶ್ರೀ ದತ್ತ ವಿಜಯಾನಂದ ಸ್ವಾಮೀಜಿ, ಮಾನ್ಯ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಜಿ ಟಿ ದೇವೇಗೌಡ, ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಪ್ರತಾಪ್ ಸಿಂಹ,ಕರ್ನಾಟಕ ಉತ್ತರದ ಸಂಸ್ಕಾರ ಭಾರತಿಯ ಅಧ್ಯಕ್ಷರಾದ ರಾಜಾ ಶ್ರೀ ಕೃಷ್ಣ ದೇವರಾಯ, ಪ್ರಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಕರ್ನಾಟಕ ದಕ್ಷಿಣದ ಸಂಸ್ಕಾರ ಭಾರತಿಯ ಅಧ್ಯಕ್ಷರಾದ ಶ್ರೀ ಟಿ ಎಸ್ ನಾಗಾಭರಣ, ಸಂಸ್ಕಾರ ಭಾರತಿಯ ಅಖಿಲ ಭಾರತ ಕಾರ್ಯದರ್ಶಿಗಳಾದ ಶ್ರೀ ಅಮೀರ್ ಚಂದ್ ಸಂಸ್ಕೃತಿ ಸಚಿವಾಲಯ ಭಾರತ ಸರ್ಕಾರ ಮತ್ತು ಸಂಸ್ಕಾರ ಭಾರತಿಯ ದಕ್ಷಿಣ ಮಧ್ಯ ಕ್ಷೇತ್ರದ ನಿರ್ದೇಶಕರಾದ ಡಾ. ದೀಪಕ್ ಶಾಂತಾರಾಂ ಕಿರವಾಡ್ಕರ್ ಉಪಸ್ಥಿತರಿದ್ದರು.
ಸಂಸ್ಕಾರ ಭಾರತಿಯ ಸಂಸ್ಥಾಪಕ ಸಂಘಟನಾ ಮಂತ್ರಿ ಪದ್ಮಶ್ರೀ ಬಾಬಾ ಯೋಗೇಂದ್ರಜಿ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಮೈಸೂರು ಸಂಸ್ಕಾರ ಭಾರತೀಯ ವೆಬ್ಸೈಟ್ ಲೋಕಾರ್ಪಣೆಗೊಳಿಸಲಾಯಿತು.