ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹಣೆಗಾಗಿ ವಿಶ್ವ ಹಿಂದು ಪರಿಷತ್ ನಿಂದ 4 ಲಕ್ಷ ಹಳ್ಳಿ , 11 ಕೋಟಿ ಕುಟುಂಬಗಳ ಸಂಪರ್ಕ: ವಿಹಿಂಪ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್

ಮಂಗಳವಾರ, 22 ಡಿಸೆಂಬರ್ 2020ರಂದು ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಅಲೋಕ್ ಕುಮಾರ್ ಅವರ ಪತ್ರಿಕಾ ಗೋಷ್ಠಿಯ ವಿವರ

PRESS STATEMENT OF SHRI ALOK KUMAR, CENTRAL WORKING PRESIDENT, VHP ON TUESDAY, 22.12.2020

ಬೆಂಗಳೂರು: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಯೋಜನೆಯಂತೆ  ಸಮಸ್ತ ಹಿಂದೂ ಸಮಾಜದಿಂದ ಮಂದಿರ ನಿರ್ಮಾಣಕ್ಕಾಗಿ ಧನ ಸಂಗ್ರಹಣೆಗೆ ವಿಶ್ವ ಹಿಂದೂ ಪರಿಷದ್(ವಿಹಿಂಪ) ತನ್ನ ಸಂಪೂರ್ಣ ಸಹಯೋಗ ನೀಡಲಿದೆ. ವಿಹಿಂಪನ ಕಾರ್ಯಕರ್ತರು  ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿ ಮಂದಿರದ ನಿರ್ಮಾಣಕ್ಕೆ ಹಾಗೂ ಅಲ್ಲಿನ ಇತರೆ ಸೌಲಭ್ಯಗಳಿಗೆ ಅನುವಾಗುವಂತೆ ದೇಶದ 4 ಲಕ್ಷ ಹಳ್ಳಿಗಳನ್ನು ಹಾಗೂ 11 ಕೋಟಿ ಕುಟುಂಬಗಳನ್ನು ತಲುಪಲಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 27,500 ಹಳ್ಳಿಗಳನ್ನು, ಸುಮಾರು 90 ಲಕ್ಷ ರಾಮಭಕ್ತರನ್ನು ತಲುಪುವ, ಹಾಗೂ ರಾಮಮಂದಿರಕ್ಕೆ ಧನ ಸಂಗ್ರಹಿಸುವ ಯೋಜನೆಯನ್ನು ವಿಹಿಂಪ ಹಾಕಿಕೊಂಡಿದೆ. ಉಡುಪಿಯ ಪೇಜಾವರ ಮಠದ ಪೂಜ್ಯ ಸ್ವಾಮೀಜಿಯವರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ವಿಶ್ವಸ್ತರಲ್ಲಿ ಒಬ್ಬರಾಗಿದ್ದಾರೆ.

ರೂ 10/-, ರೂ100/-, ರೂ 1000/- ದ ಮುದ್ರಿತ ಕೂಪನ್ ಗಳ ಸಹಾಯದಿಂದ ಧನಸಂಗ್ರಹ ನಡೆಯಲಿದೆ. ಇನ್ನು ರೂ. 2000/- ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತ ಅರ್ಪಿಸಿದ ಭಕ್ತರಿಗೆ ರಸೀದಿ ನೀಡಲಾಗುವುದು ಹಾಗೂ ಈ ಭಕ್ತರು ಭಾರತೀಯ ಆದಾಯ ತೆರಿಗೆ ಕಾಯ್ದೆಯ 80ಜಿ ಸೆಕ್ಷನ್ ಅಡಿಯಲ್ಲಿ ತೆರಿಗೆ ವಿನಾಯತಿಯ ಸೌಲಭ್ಯ ಪಡೆಯಬಹುದಾಗಿದೆ.

5 ಕಾರ್ಯಕರ್ತರನ್ನು ಒಳಗೊಂಡ ತಂಡ ಈ ನಿಧಿ ಸಮರ್ಪಣಾ ಅಭಿಯಾನದಲ್ಲಿರುತ್ತದೆ. ಸಂಗ್ರಹವಾದ ಅಷ್ಟೂ ಹಣವನ್ನು 48 ಗಂಟೆಗಳೊಳಗೆ ತೀರ್ಥಕ್ಷೇತ್ರ ಟ್ರಸ್ಟ್ ನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ತನ್ನ ತಂಡದಲ್ಲಿ ಸಂಗ್ರಹವಾದ ಹಣವನ್ನು ಜಮೆ ಮಾಡುವ ಪ್ರತಿ ಕಾರ್ಯಕರ್ತರಿಗೆ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಬ್ಯಾಂಕ್ ಆಫ್ ಬರೋಡಾ ಅಥವಾ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನೋಂದಣಿ ಸಂಖ್ಯೆ ನೀಡಲಾಗಿರುತ್ತದೆ. ಹಣ ಸಂಗ್ರಹಣೆ, ಖಾತೆಗೆ ಪಾವತಿಸುವಲ್ಲಿ ವ್ಯವಸ್ಥೆಯು ಸಂಪೂರ್ಣ ಪಾರದರ್ಶಕವಾಗಿರುತ್ತದೆ.

ಲಾರ್ಸನ್ ಅಂಡ್ ಟುಬ್ರೋ ಸಂಸ್ಥೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮಂದಿರ ನಿರ್ಮಾಣ ಕಾರ್ಯಕ್ಕೆ ತನ್ನ ಅಭಿಯಂತರರನ್ನು ನಿಯೋಜಿಸಲಿದೆ. ಐಐಟಿ ಮುಂಬೈ, ಐಐಟಿ ದೆಹಲಿ, ಐಐಟಿ ಚೆನ್ನೈ , ಐಐಟಿ ಗುವಹಾಟಿ, ಸಿ ಬಿ ಆರ್ ಐ ರೂರ್ಕಿ ಹಾಗೂ ಲಾರ್ಸನ್ ಅಂಡ್ ಟುಬ್ರೋ ಸಂಸ್ಥೆ ಮಂದಿರದ ಅಡಿಪಾಯದ ನೀಲನಕ್ಷೆಯ ಕೆಲಸದಲ್ಲಿ ಈಗಾಗಲೇ ತೊಡಗಿದ್ದಾರೆ.

ಸಂಪೂರ್ಣ ಮಂದಿರ ಕಲ್ಲಿನ ಬ್ಲಾಕ್ ಗಳ ಸಹಾಯದಿಂದ ನಿರ್ಮಿತವಾಗಲಿದೆ. ಮಂದಿರದ ವಿಸ್ತೀರ್ಣ 2.7 ಎಕರೆ. 54,000 ಚದರ ಅಡಿಯ ಜಾಗದಲ್ಲಿ ಮಂದಿರ ನಿರ್ಮಾಣಗೊಳ್ಳಲಿದೆ. 360 ಅಡಿ ಉದ್ದ ಹಾಗೂ 235 ಅಡಿ ಅಗಲದ ಮಂದಿರದಲ್ಲಿ ಮೂರು ಅಂತಸ್ತು ಹಾಗೂ 5 ಮಂಟಪಗಳಿರುತ್ತವೆ. ನೆಲಮಾಳಿಗೆಯಲ್ಲಿ 160 ಕಂಬಗಳು, ಮೊದಲನೆಯ ಮಹಡಿಯಲ್ಲಿ 132 ಕಂಬಗಳು, ಎರಡನೆಯ ಮಹಡಿಯಲ್ಲಿ 74 ಕಂಬಗಳಿರುತ್ತವೆ.

2024ರ ಒಳಗಾಗಿ ಶ್ರೀರಾಮ ಲಲ್ಲಾನನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು ಹಾಗೂ ಭಕ್ತರಿಗೆ ದರ್ಶನ ವ್ಯವಸ್ಥೆ ಸಾಧ್ಯವಾಗಬಹುದಾಗಿದೆ ಎಂದು ಅಂದಾಜಿಸಲಾಗಿದೆ.

ಮಂದಿರ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ದರ್ಜೆಯ ಗ್ರಂಥಾಲಯ, ದಾಖಲಾತಿಗಳ ಭಂಡಾರ, ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ, ಯಜ್ಞಶಾಲೆ, ವೇದ ಪಾಠಶಾಲೆ, ಸತ್ಸಂಗ ಭವನ, ಪ್ರಸಾದ ವಿನಿಯೋಗ ಸ್ಥಳ, ಅಂಫಿ ಥಿಯೇಟರ್, ಧರ್ಮಶಾಲೆ, ಪ್ರದರ್ಶನಾಲಯ ಸೇರಿದಂತೆ ಹಲವು ಸೌಲಭ್ಯಗಳು ಮಂದಿರದ ಆವರಣದಲ್ಲಿ ನಿರ್ಮಾಣವಾಗಲಿವೆ.

ದೇಶದ ಮೂಲೆಮೂಲೆಗಳಿಗೂ ಶ್ರಾವ್ಯ, ದೃಶ್ಯ ಮಾಧ್ಯಮದ ಮೂಲಕ ಮಾಹಿತಿಯನ್ನು ತಲುಪಿಸಲಾಗುವುದು. ಚಿತ್ರರಂಗ ಕ್ಷೇತ್ರದ ಪ್ರಖ್ಯಾತರಾದ ಡಾ. ಚಂದ್ರಪ್ರಕಾಶ್ ದ್ವಿವೇದಿ ರಾಮಮಂದಿರದ ಇತಿಹಾಸ, ಈ ಅಭಿಯಾನದ ಮಾಹಿತಿಗಳನ್ನು ಒಳಗೊಂಡ ಸಾಕ್ಷ್ಯಚಿತ್ರವನ್ನು ರಚಿಸಿದ್ದಾರೆ. ಈ ಸಾಕ್ಷ್ಯಚಿತ್ರವು ಖ್ಯಾತ ಸಿನಿಮಾ ನಟರಾದ ಶ್ರೀ ಅಕ್ಷಯ್ ಕುಮಾರ್ ಅವರ ಅಭಿಯಾನದ ಕುರಿತಾದ ನಿವೇದನೆ ಒಳಗೊಂಡಿರುತ್ತದೆ.

ಈ ಅಭಿಯಾನ ಹಾಗೂ ಮಂದಿರ ನಿರ್ಮಾಣ ಕೇವಲ ಮತ್ತೊಂದು ಮಂದಿರದ ನಿರ್ಮಾಣದಂತೆ ಅಲ್ಲ. ಇದು ಜಾಗೃತ ಹಿಂದೂಶಕ್ತಿಯ ಪುನರುತ್ಥಾನದ ಸಂಕೇತವಾಗಿದೆ. ಸಮಾಜವನ್ನು ಮೇಲು ಕೀಳು ಎಂಬ ಭಾವನೆಗಳಿಂದ ಮುಕ್ತಗೊಳಿಸುವ, ಬಡತನ, ಆರೋಗ್ಯ, ಶಿಕ್ಷಣ, ಕೌಶಲ್ಯದ ನ್ಯೂನತೆಗಳನ್ನು ನಿರ್ಮೂಲನೆ ಮಾಡುವ, ಮಹಿಳೆಯರ ಘನತೆಯನ್ನು ಮರುಸ್ಥಾಪಿಸುವ, ಭಯೋತ್ಪಾದನೆಯ ಉಪದ್ರವವನ್ನು ನಿರ್ಮೂಲನೆ ಮಾಡುವ ವೇದದ ಗುರಿಯಾದ  ‘ಸರ್ವೇ ಭವಂತು ಸುಖಿನಃ’ (ಎಲ್ಲರೂ ಸಂತೋಷವಾಗಿರಲಿ, ಎಲ್ಲರೂ ಆರೋಗ್ಯವಾಗಿರಲಿ, ಯಾರೂ ದುಃಖದಿಂದ ಬಳಲದಿರಲಿ) ಎಂಬ ಉದ್ದೇಶದಿಂದ ಕೂಡಿದೆ.

ಶ್ರೀರಾಮ ಮಂದಿರ ನಿರ್ಮಾಣ ವೈಶ್ವಿಕವಾಗಿ ಸಮಸ್ತ ಹಿಂದೂಗಳ ಹೆಗ್ಗುರಿಯಾಗಿದ್ದು  ಇದನ್ನು ಸಾಧಿಸುವಲ್ಲಿ ಸಫಲರಾಗುತ್ತೇವೆ ಎಂದು ವಿಹಿಂಪ ನಂಬುತ್ತದೆ.

PRESS STATEMENT OF SHRI ALOK KUMAR, CENTRAL WORKING PRESIDENT, VHP ON TUESDAY, 22.12.2020

The Vishva Hindu Parishad (VHP) has resolved to extend all cooperation to Shri Ram Janmabhoomi Teerth Kshetra Trust for collecting monetary offerings from across the Hindu Society. The VHP workers will reach out to more than 4 Lakh villages and 11 Crore families for their contribution to the construction of Shri Ramjanmabhoomi Temple and other facilities in Ayodhya.

In the state of Karnataka, the VHP expects to reach more than 27500 villages and some 90 Lakhs devotees for obtaining the donations for the Mandir. Udupi Pejawar Math Swami Pujya Shri Vishva Prasanna Teerth is a Trustee of Shri Ram Janmabhoomi Teerth Kshetra. 

The collections would be made by coupons printed in the denomination of Rs. 10, Rs. 100 and Rs. 1000. The donations for Rs. 2000 or more shall be against receipt and the donor shall have the benefit of Section 80G of the Income Tax Act.

The collection tolis would be of 5 volunteers each. They would report to a depositor. All collections would be deposited in the bank account of the Teerth Kshetra within 48 hours. Every depositor will have a registered code number at the nearest branch of one of the three banks namely State Bank of India, Bank of Baroda and Punjab National Bank. Full transparency would be maintained in the collection. 

Larsen and Toubro have been engaged to construct the Temple. Tata Consultancy services would be the Engineers for the construction. Engineers from IIT Mumbai, IIT Delhi, IIT Chennai, IIT Guwahati, CBRI Roorkee, Larsen & Toubro are working on the foundation drawing. The whole temple will be of stone blocks.

The Temple would have a total area of 2.7 acres. The construction area is 57,400 sq. ft. The length of the Temple would be 360 ft with 235 ft. The Temple would be three storied structure and with 5 Mandaps. The number of columns would be 160 on the Ground Floor, 132 on the First Floor and 74 on the Second Floor.

It is expected that by 2024 Shri Ram Lala shall be established in the sanctum sanctorum of the main Temple and the devotees invited to have His darshan in the grand Temple. 

Along with the Temple are to come up, of the international standards Library, Archives, Museum, Research Centre, Yagnyashala, Ved Pathshala, Satsangh Bhawan, Prasad distribution centre, amphitheatre, Dharmshala, Exhibition and other facilities.

All means of audio visual communications and media outreach would be employed to take the message to the entire length and breadth of the country. Dr. Chandraprakash Dwivedi, a renowned name in the film world has prepared a documentary containing a brief history and objects of the campaign together with an appeal from the cine actor Shri Akshay Kumar for the promotion of the campaign. The VHP believes that this is not a movement merely for one more Temple but is a conscious effort of Hindu rejuvenation, freeing the Society of its ills such as the feelings of high and low, to eradicate the deficiencies of poverty, health, education and skills, to restore the dignity of women, to eradicate the scourge of terrorism from the face of the world and to realise the vedic goals of Sarve Bhavantu Sukhinah – may all be happy, may all be healthy, may all be discriminating and wise and let nobody suffer from sorrows. The VHP considers this to be the world mission of Hindus and is confident of achieving it.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

VHP extends cooperation with Sri Ram Janmabhoomi Teerth Kshetra Trust to collect monetary offerings from Hindu society.

Tue Dec 22 , 2020
22 Dec 2020, Bengaluru: Shri Alok Kumar, Supreme Court Advocate, Central Working President of the Vishva Hindu Parishad, Chief of Sri Rama Janmabhoomi Teerth Kshetra Trust’s Nidhi Samarpana Abhiyana addressed a press conference here in the city today. Sri Na Thippeswamy, Kshetriya Karyavah of the RSS’ Dakshina Madhya Kshetra comprising […]