ಮಧ್ಯಪ್ರದೇಶದಲ್ಲಿಯೂ ಲವ್ ಜಿಹಾದ್ ವಿರೋಧಿ ಕಾನೂನು

ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶದ ನಂತರ ಇದೀಗ ಮಧ್ಯಪ್ರದೇಶ ಸರ್ಕಾರ ಲವ್ ಜಿಹಾದ್ ವಿರೋಧಿ ಕಾನೂನು ತರಲು ಮುಂದಾಗಿದೆ. ಈ ಮಸೂದೆಯು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡವನ್ನು ವಿಧಿಸುವ ಅವಕಾಶವನ್ನು ನೀಡಿದೆ.

ಇಂದು (ಡಿ.26, ಶನಿವಾರ) ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಲವಂತದ ಧಾರ್ಮಿಕ ಮತಾಂತರ ವಿರೋಧಿ ಮಸೂದೆ ‘ಧರ್ಮ ಸ್ವಾತಂತ್ರ್ಯ ಮಸೂದೆ-2020’ನ್ನು ಅಂಗೀಕರಿಸಲಾಯಿತು.

ಈ ತಿಂಗಳ ಅಂತ್ಯದಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ತದನಂತರ ರಾಜ್ಯಪಾಲರ ಅಂಕಿತದ ಮೂಲಕ ಮಸೂದೆ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಮಸೂದೆಯಡಿ, ಒತ್ತಾಯಪೂರ್ವಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲಾಗುವುದು. ಬಲವಂತವಾಗಿ ಮತಾಂತರಗೊಂಡವರು ಎಸ್‌ಸಿ ಅಥವಾ ಎಸ್‌ಟಿಗೆ ಸೇರಿದ್ದರೆ 2 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ಗರಿಷ್ಠ 1 ಲಕ್ಷ ರೂ. ದಂಡ ವಿಧಿಸಬಹುದಾಗಿದೆ. ಪ್ರಕರಣದಲ್ಲಿ ಆರೋಪಿಯಷ್ಟೇ ಅಲ್ಲದೇ ಆತನ ಹಿಂದೆ ಇರುವ ಸಂಘಟನೆಗಳು ಮತ್ತು ಸಂಸ್ಥೆಗಳ ಮೇಲೆಯೂ ದೋಷಾರೋಪ ಮಾಡಬಹುದಾಗಿದೆ.

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರಕಾರ ಲವ್‌ ಜಿಹಾದ್‌ ವಿರೋಧಿ ಕಾನೂನು ಜಾರಿಗೆ ಬಳಿಕ 35 ಮಂದಿಯನ್ನು ಬಂದಿಸಲಾಗಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಯುವಾ ಬ್ರಿಗೇಡ್ ನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

Mon Dec 28 , 2020
ನವದೆಹಲಿ : ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವಾ ಬ್ರಿಗೇಡ್ ನ ಸಾಮಾಜಿಕ ಕೆಲಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 2020ರ ಕೊನೆಯ ಹಾಗೂ 72ನೇ ಮನ್ ಕಿ ಬಾತ್ (‘ಮನದ ಮಾತು’) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಶ್ರೀರಂಗಪಟ್ಟಣದಲ್ಲಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವಾ ಬ್ರಿಗೇಡ್ ತಂಡ ಶಿಥಿಲಗೊಂಡಿದ್ದ, ಅವ್ಯವಸ್ಥೆಗೀಡಾಗಿದ್ದ ವೀರಭದ್ರಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮಾಡಿತ್ತು. ಈ ಜೀರ್ಣೋದ್ಧಾರ ಕಾಮಗಾರಿಯ ಫೋಟೋಗಳು […]