ಅಲ್ಪಸಂಖ್ಯಾತ ಸಹಕಾರಿ ಸೊಸೈಟಿಗಳಿಗೆ ಆಡಳಿತಾಧಿಕಾರಿ ನೇಮಿಸುವ ವಸೂದೆಗೆ ವಿಧಾನಸಭೆಯಲ್ಲಿ ಒಪ್ಪಿಗೆ

Vidhana Soudha

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಸಹಕಾರಿ ಸೊಸೈಟಿಗಳಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರದ ಸಹಕಾರ ಇಲಾಖೆಗೆ ನೀಡುವ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ಮಸೂದೆ 2021ಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ಪಡೆದಿದೆ.

ಮಸೂದೆಯನ್ನು ಮಂಡಿಸಿ ಮಾತನಾಡಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಅವರು, ರಾಜ್ಯದಲ್ಲಿ 3.71 ಲಕ್ಷ ಸಹಕಾರ ಸೊಸೈಟಿಗಳಿವೆ, ಇದರಲ್ಲಿ 6,807 ಸೊಸೈಟಿಗಳನ್ನು ಅಲ್ಪಸಂಖ್ಯಾತರ ನಡೆಸುತ್ತಿದ್ದಾರೆ. ಈ ಮಸೂದೆಯಿಂದ ಸೊಸೈಟಿಗಳನ್ನು ನಿಯಂತ್ರಿಸುವುದು ಮಾತ್ರವಲ್ಲದೆ, ಸೊಸೈಟಿಗಳ ಸದಸ್ಯರು ಮತ್ತು ಸಾರ್ವಜನಿಕರ ಹಿತವನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದರು.

ಮಸೂದೆಯ ಬಗ್ಗೆ ಕಾಂಗ್ರೆಸ್ ಧರಣಿ ನಡೆಸುತ್ತಿದ್ದ ಚರ್ಚೆಯಲ್ಲಿ ಭಾಗವಹಿಸಲಿಲ್ಲ. ಜೆಡಿಎಸ್‌ ಚರ್ಚೆಗೆ ಸಿದ್ಧತೆ ನಡೆಸಿದ್ದರೂ ಕೂಡಾ ಗದ್ದಲದ ಕಾರಣ ಮಾತನಾಡಲು ಸಾಧ್ಯವಾಗಲಿಲ್ಲ. ಇದರಿಂದ ಬೇಸತ್ತ ಜೆಡಿಎಸ್‌ ಸದಸ್ಯರು ಸಭಾತ್ಯಾಗ ನಡೆಸಿದರು.

ವಿಧಾನಪರಿಷತ್ ನಲ್ಲಿ ಅಂಗೀಕಾರದ ಬಳಿಕ ಕಾನೂನು ಜಾರಿಗೆ ಬರಲಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಬುಡಕಟ್ಟು ಜನಾಂಗದ ಅಪ್ರತಿಮ ನಾಯಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಸ್ಮರಣೆಯಲ್ಲಿ ನಿರ್ಮಾಣವಾಗುತ್ತಿದೆ ಭಾರತದ ಅತಿದೊಡ್ಡ ಹಾಕಿ ಕ್ರೀಡಾಂಗಣ

Thu Mar 25 , 2021
ಭಾರತದ ಅತಿದೊಡ್ಡ ಹಾಕಿ ಕ್ರೀಡಾಂಗಣ ನಿರ್ಮಾಣಕ್ಕಾಗಿ ಓಡಿಶಾದ ರೂರ್‌ ಕೆಲಾದಲ್ಲಿ ಶಿಲಾನ್ಯಾಸ  ನೆರವೇರಿಸಲಾಗಿದೆ. ಬುಡಕಟ್ಟು ಜನಾಂಗದ ಅಪ್ರತಿಮ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಬಿರ್ಸಾ ಮುಂಡಾ ಅವರ ಸ್ಮರಣೆಯಲ್ಲಿ ನಿರ್ಮಾಣವಾಗುತ್ತಿರುವ ಈ ಅತ್ಯಾಧುನಿಕ ಕ್ರೀಡಾಂಗಣ ೨೦ ಸಾವಿರಕ್ಕೂ ಹೆಚ್ಚು ಜನ ಪ್ರೇಕ್ಷಕರ ಸಾಮರ್ಥ್ಯ ಹೊಂದಲಿದೆ. ಭಾರತದ ರಾಷ್ಟ್ರೀಯ ಕ್ರೀಡೆಯೂ ಆಗಿರುವ ಹಾಕಿ ಕ್ರೀಡೆಯ ೨೦೨೩ರ ವಿಶ್ವಕಪ್ ಆತಿಥ್ಯವನ್ನು ಬಿರ್ಸಾ ಮುಂಡಾ ಕ್ರೀಡಾಂಗಣ ವಹಿಸಲಿದೆ. ಈ ಕ್ರೀಡಾಂಗಣವು 120 ಕೋಟಿ ವೆಚ್ಚದಲ್ಲಿ […]