ಏ.2ರಿಂದ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಓದು-ಬರಹ ಅಭಿಯಾನ

ಬೆಂಗಳೂರು: ರಾಜ್ಯದ 3.2 ಲಕ್ಷ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಉದ್ದೇಶದಿಂದ ಏ.2 ರಿಂದ ಓದು-ಬರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಓದು-ಬರಹ ಅಭಿಯಾನವು ಏ.2ರಿಂದ ಮೇ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ. 15 ರಿಂದ 50 ವರ್ಷದ 2.4 ಲಕ್ಷ ಮಹಿಳೆಯರು ಮತ್ತು 80,000 ಪುರುಷ ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ಗುರಿ ಹೊಂದಲಾಗಿದೆ. ಕಲಿಕೆ ಪೂರ್ಣಗೊಂಡ ಬಳಿಕ ಪ್ರತಿಯೊಬ್ಬರಿಗೂ ಪರೀಕ್ಷೆ ನಡೆಸಿ ಇಲಾಖೆಯಿಂದ ಸಾಕ್ಷರತಾ ಪ್ರಮಾಣ ಪತ್ರ ನೀಡಲಾಗುವುದು. ಪ್ರಮುಖವಾಗಿ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದರು.

ರಾಜ್ಯದಲ್ಲಿ ಒಟ್ಟು 1.26 ಕೋಟಿ ಅನಕ್ಷರಸ್ಥರನ್ನು ಗುರುತಿಸಲಾಗಿದ್ದು, ಈಗಾಗಲೇ 57 ಲಕ್ಷ ಜನರನ್ನು ಸಾಕ್ಷರರನ್ನಾಗಿಸಲಾಗಿದೆ. ಹಂತ ಹಂತವಾಗಿ ಉಳಿದವರನ್ನು ಅಕ್ಷರಸ್ಥರನ್ನಾಗಿಸಲಾಗುವುದು ಎಂದರು.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಮೆಗಾ ಲೋಕ ಅದಾಲತ್‌’ನಲ್ಲಿ ಒಂದೇ ದಿನ ದಾಖಲೆಯ 3.32 ಲಕ್ಷ ಪ್ರಕರಣಗಳ ಇತ್ಯರ್ಥ

Tue Mar 30 , 2021
ರಾಜ್ಯದಾದ್ಯಂತ ಮಾ.27ರಂದು  ನಡೆದ  ಮೆಗಾ ಲೋಕ ಅದಾಲತ್‌ ನಲ್ಲಿ ಒಂದೇ ದಿನ ಒಟ್ಟು 3.32 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು, 1,033 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ತಿಳಿಸಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಮಟ್ಟ ಸೇರಿದಂತೆ ರಾಜ್ಯದೆಲ್ಲೆಡೆಯ ಒಟ್ಟು 963 ನ್ಯಾಯಪೀಠಗಳಲ್ಲಿ ನಡೆದ ಈ ಲೋಕ ಅದಾಲತ್‌ ನಲ್ಲಿ […]