ಚೀನಾಗಡಿಯಲ್ಲಿ ಮಾದರಿ ಗ್ರಾಮ ನಿರ್ಮಿಸಲು ಮುಂದಾದ ಅರುಣಾಚಲ ಸರ್ಕಾರ

ವಿದೇಶೀ ದುಸ್ಸಾಹಸ ತಡೆಗಟ್ಟುವ ನಿಟ್ಟಿನಲ್ಲಿ ಗಡಿ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 3 ಗ್ರಾಮಗಳನ್ನು ನಿರ್ಮಿಸಲಾಗುವುದು ಎಂದು ಅರುಣಾಚಲ ಪ್ರದೇಶ ಸರ್ಕಾರ ಘೋಷಿಸಿದೆ.

ಹಣಕಾಸು ಸಚಿವ ಚೋವ್ನಾ ಮೈನ್ ಅವರು ಬುಧವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಗ್ರಾಮಗಳ ನಿರ್ಮಾಣ ಈ ಯೋಜನೆಯನ್ನು ಪ್ರಕಟಿಸಿದರು.

ರಾಜ್ಯದ ಪೂರ್ವ, ಕೇಂದ್ರೀಯ ಮತ್ತು ಪಶ್ಚಿಮ ಭಾಗಗಳಲ್ಲಿ ಈ ಗ್ರಾಮಗಳನ್ನು ನಿರ್ಮಿಸಲಾಗುವುದು. ಮೂರು ಗ್ರಾಮಗಳ ನಿರ್ಮಾಣಕ್ಕಾಗಿ 30 ಕೋಟಿ ರೂ. ನಿಗದಿಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಮತ್ತಷ್ಟು ಗ್ರಾಮಗಳನ್ನು ಅಭಿವೃದ್ದಿ ಪಡಿಸಲಾಗುವುದು ಹಾಗೂ ಗಡಿಗಳಲ್ಲಿರುವ ಗ್ರಾಮಗಳಿಗೆ ರಸ್ತೆ ಸಂಪರ್ಕ, ವಿದ್ಯುತ್,  ನೀರು, ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಲಾಗುವುದು ಎಂದು ಚೋವ್ನಾ ಮೈನ್ ತಿಳಿಸಿದರು.

ಇತ್ತೀಚೆಗೆ ಉತ್ತರಾಖಂಡ ಸರ್ಕಾರ ಭಾರತ-ಚೀನಾ ಗಡಿಯ 100 ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿತ್ತು. ಈ ಗ್ರಾಮಗಳನ್ನು ಮಾದರಿ ಕೃಷಿ ಗ್ರಾಮಗಳನ್ನಾಗಿ ಪರಿವರ್ತಿಸಿ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಕೃಷಿ ಸಚಿವ ಸುಬೋಧ್‌ ಉನ್ಯಾಲ್‌ ಹೇಳಿದ್ದಾರೆ. ಈ ಗ್ರಾಮಗಳಲ್ಲಿ ಮೀನುಗಾರಿಕೆ, ಹೈನುಗಾರಿಕೆ, ಜೇನು ಸಾಕಣೆಗೂ ಆದ್ಯತೆ ನೀಡಿ ಕೃಷಿ ಹಾಗೂ ತೋಟಗಾರಿಕೆಗೆ ಉತ್ತೇಜಿಸಲಾಗುವುದು. ಇದರಿಂದಾಗಿ ಜನರಿಗೆ ಗ್ರಾಮದಲ್ಲೇ ಉದ್ಯೋಗ ದೊರಕಿ ವಲಸೆ ತಪ್ಪುತ್ತದೆ. ಮತ್ತು ಗಡಿ ಭಾಗದಲ್ಲಿ ಸಮೃದ್ಧಿ ಸೃಷ್ಟಿಯಾಗುತ್ತದೆ ಎಂದಿದ್ದಾರೆ

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ರಾಮಮಂದಿರ ದೇವಾಲಯ ಸಂಕೀರ್ಣ ನಿರ್ಮಾಣಕ್ಕೆ ಹೆಚ್ಚುವರಿ ಭೂಮಿ ಖರೀದಿ

Fri Mar 5 , 2021
ಪೂರ್ವ ಯೋಜನೆಯಂತೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ದೇವಾಲಯ ಸಂಕೀರ್ಣ ವಿಸ್ತರಿಸುವ ಸಲುವಾಗಿ ದೇಗುಲಕ್ಕೆ ಹೊಂದಿಕೊಂಡಿರುವ 7,285 ಚದರ ಅಡಿಯಷ್ಟು ಭೂಮಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌  ಖರೀದಿಸಿದೆ. ರಾಮಮಂದಿರ ದೇವಾಲಯ ಸಂಕೀರ್ಣವನ್ನು 70 ಎಕರೆ ಪ್ರದೇಶದಿಂದ 107 ಎಕರೆ ಪ್ರದೇಶಕ್ಕೆ ವಿಸ್ತರಿಸಬೇಕೆಂಬ ಯೋಜನೆಗೆ ಅನುಗುಣವಾಗಿ ರಾಮಜನ್ಮಭೂಮಿ ಪಕ್ಕದಲ್ಲಿರುವ  7,825 ಚ. ಅಡಿ ಭೂಮಿಯನ್ನು, ಚ.ಅಡಿಗೆ ₹1,373 ಬೆಲೆ ನೀಡಿ ಟ್ರಸ್ಟ್ ಖರೀದಿಸಿದೆ. ಈ ಹೆಚ್ಚುವರಿ […]