ರಾಮಮಂದಿರ ದೇವಾಲಯ ಸಂಕೀರ್ಣ ನಿರ್ಮಾಣಕ್ಕೆ ಹೆಚ್ಚುವರಿ ಭೂಮಿ ಖರೀದಿ

ಪೂರ್ವ ಯೋಜನೆಯಂತೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ದೇವಾಲಯ ಸಂಕೀರ್ಣ ವಿಸ್ತರಿಸುವ ಸಲುವಾಗಿ ದೇಗುಲಕ್ಕೆ ಹೊಂದಿಕೊಂಡಿರುವ 7,285 ಚದರ ಅಡಿಯಷ್ಟು ಭೂಮಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌  ಖರೀದಿಸಿದೆ.

ರಾಮಮಂದಿರ ದೇವಾಲಯ ಸಂಕೀರ್ಣವನ್ನು 70 ಎಕರೆ ಪ್ರದೇಶದಿಂದ 107 ಎಕರೆ ಪ್ರದೇಶಕ್ಕೆ ವಿಸ್ತರಿಸಬೇಕೆಂಬ ಯೋಜನೆಗೆ ಅನುಗುಣವಾಗಿ ರಾಮಜನ್ಮಭೂಮಿ ಪಕ್ಕದಲ್ಲಿರುವ  7,825 ಚ. ಅಡಿ ಭೂಮಿಯನ್ನು, ಚ.ಅಡಿಗೆ ₹1,373 ಬೆಲೆ ನೀಡಿ ಟ್ರಸ್ಟ್ ಖರೀದಿಸಿದೆ. ಈ ಹೆಚ್ಚುವರಿ ಜಾಗದಲ್ಲಿ ಮ್ಯೂಸಿಯಂ, ಗ್ರಂಥಾಲಯ, ರಾಮನ ಜೀವನವನ್ನು ಪ್ರಚುರಪಡಿಸುವ ಫೋಟೋ ಗ್ಯಾಲರಿ ಒಳಗೊಂಡ ಬೃಹತ್‌ ಸಂಕೀರ್ಣ ನಿರ್ಮಾಣದ ಯೋಜನೆ ರೂಪಿಸಿದೆ. ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ 2100 ಕೋಟಿ ರು. ನಿಧಿ ಸಂಗ್ರಹವಾಗಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಭಾರತ 75 : ಸ್ವಾತಂತ್ರ್ಯೋತ್ಸವ ಆಚರಣೆಗೆ 259 ಸದಸ್ಯರ ಸಮಿತಿ ರಚನೆ

Sat Mar 6 , 2021
75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಮತ್ತು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಹುದು ಎಂಬ ಕುರಿತು ಈ ಸಮಿತಿ ಮಾರ್ಗಸೂಚಿಗಳನ್ನು, ನಿರ್ದೇಶನಗಳನ್ನು  ನೀಡಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಈ ಸಮಿತಿಯು 259 ಸದಸ್ಯರನ್ನು ಒಳಗೊಂಡಿದ್ದು,  ಮಾಜಿ ರಾಷ್ಟ್ರಪತಿ ಪ್ರತಿಭಾ […]