ಸೂಪರ್ ಸ್ಟಾರ್ ರಜನಿಕಾಂತ್ ಗೆ 2021ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ದಕ್ವಿಣ ಭಾರತದ ಖ್ಯಾತ ನಟ ರಜನಿಕಾಂತ್ಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆದ 51ನೇ ಚಲನಚಿತ್ರ ಕಲಾವಿದ ಎಂಬ ಹೆಗ್ಗಳಿಕೆಗೆ ರಜನಿಕಾಂತ್​ ಪಾತ್ರರಾಗಿದ್ಧಾರೆ.

ಗಾಯಕಿ ಆಶಾ ಭೋಸ್ಲೆ, ನಿರ್ದೇಶಕ ಸುಭಾಷ್‌ ಘಾಯ್‌, ನಟ ಮೋಹನ್‌ ಲಾಲ್‌, ಸಂಗೀತ ಸಂಯೋಜಕ ಶಂಕರ್‌ ಮಹದೇವನ್ ಅವರು 2020ನೇ ಸಾಲಿನ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದರು.

2019ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರ ಆಯ್ಕೆ ತಂಡಕ್ಕೆ ನನ್ನ ಧನ್ಯವಾದಗಳು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಚಲನಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ವಾರ್ಷಿಕ ಪ್ರಶಸ್ತಿಯಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡುತ್ತದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

’ಮಠ ಪರಂಪರೆ’ಯ ಆದರ್ಶ ಕೊಂಡಿ ಶ್ರೀ ಶಿವಕುಮಾರಸ್ವಾಮಿಜೀ

Thu Apr 1 , 2021
ಸದ್ದುಗದ್ದಲವಿರದ ಸಾಧನೆ ಇಲ್ಲಿ ಗದ್ದುಗೆ ಏರಿದೆ ಕಾಯಕವೆ ಕೈಲಾಸ ಎನ್ನುವ ಮಾತು ಕೃತಿಯೊಳು ಮೂಡಿದೆ ಕಾವಿಯುಡುಗೆಯನುಟ್ಟು ನಭವೇ ಕಿರಣಹಸ್ತವ ಚಾಚಿದೆ ಎಲ್ಲ ನನ್ನವರೆನುವ ಭಾವದ ಕರುಣೆಯೇ ಕಣ್ತೆರೆದಿದೆ – ಕವಿ ಜಿ.ಎಸ್. ಶಿವರುದ್ರಪ್ಪ ಹಿಂದುತ್ವದ ಪರಮಗುಣವಾದ ಸರ್ವಭೂತಗಳಲ್ಲೂ ತನ್ನನ್ನೇ ಕಾಣುವ, ಎಲ್ಲರೂ ತನ್ನವರೇ ಎನ್ನುವ ಐಕ್ಯಭಾವವೇ ಮೂರ್ತಿವೆತ್ತಂತೆ ಇದ್ದು ಮೆರೆದ ಸಿದ್ಧಗಂಗೆಯ ಪೀಠಾಧ್ಯಕ್ಷರಾದ ಶಿವೈಕ್ಯ ಪರಮಪೂಜ್ಯ ಶ್ರೀಶ್ರೀ ಶಿವಕುಮಾರ ಸ್ವಾಮಿಜೀ (ಏಪ್ರಿಲ್ 1, 1908 – ಜನವರಿ 21, 2019) […]