ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ತಸ್ತಿಕ್ ಭತ್ತೆ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಶ್ವ ಹಿಂದು ಪರಿಷದ್ ವಿರೋಧ

ಮಂಗಳೂರು: ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ತಸ್ತಿಕ್ ಭತ್ತೆ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ  ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆ ಎಂದು ವಿಹಿಂಪ ನ  ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಅವರು ತಿಳಿಸಿದರು.

ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ.

ಆದರೆ  ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ರಾಜ್ಯ ಸರ್ಕಾರ  ನಿರ್ಧರಿಸಿರುವುದನ್ನು ವಿಶ್ವ ಹಿಂದು ಪರಿಷದ್ ತೀವ್ರವಾಗಿ ವಿರೋಧಿಸುತ್ತದೆ. ಮತ್ತು ಮದ್ರಸಗಳಿಗೆ ತಸ್ತಿಕ್ ಭತ್ತೆ ನೀಡುವುದನ್ನು ಕೈಬಿಡಬೇಕೆಂದು ಆಗ್ರಹಿಸಿದೆ.

ಹಿಂದುಗಳು ಶ್ರದ್ಧಾಕೇಂದ್ರವಾದ ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದುಗಳಿಗೆ ಮತ್ತು ದೇವಸ್ಥಾನದ ಅಭಿವೃದ್ದಿ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು.  ವಿನಃ ಮಸೀದಿ, ಮದರಸಗಳಿಗೆ ಉಪಯೋಗಿಸುವುದನ್ನು ವಿಶ್ವ ಹಿಂದು ಪರಿಷದ್ ತೀವ್ರವಾಗಿ  ಖಂಡಿಸುತ್ತೇವೆ ಎಂದರು.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆಗೆ ತಡೆಹಿಡಿಯಲು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ

Wed Jun 9 , 2021
ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ. ………………………… ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ […]