ಹಿಂದೂ ಅರ್ಚಕರ ಶೀಘ್ರ ನೇಮಕ ಮತ್ತು ದತ್ತ ಜಯಂತಿಗೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಬಜರಂಗದಳ ಮನವಿ.

ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ನ್ಯಾಯಾಲಯದ ತೀರ್ಪಿನಂತೆ ಹಿಂದೂ ಅರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಮತ್ತು ದತ್ತ ಜಯಂತಿಗೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಬಜರಂಗದಳ ಮನವಿ.

ಚಿಕ್ಕಮಗಳೂರಿನ ದತ್ತ ಪೀಠವು ಹಿಂದಿನ ಹಲವು ದಶಕಗಳಿಂದ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದ್ದು ದುರದೃಷ್ಟವಶಾತ್ ಅಲ್ಲಿ ಮುಸ್ಲಿಂ ಮೌಲ್ವಿಗಳು ಪೂಜೆ ಸಲ್ಲಿಸುತ್ತಿದ್ದು ಪ್ರಸ್ತುತ ಹೈಕೋರ್ಟ್ ನ ತೀರ್ಪಿನ ಪ್ರಕಾರ ಮೌಲ್ವಿಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ.ಕಳೆದ ಹಲವಾರು ವರ್ಷಗಳಿಂದ ಹಿಂದೂ ಸಮಾಜವು ಈ ಒಂದು ಅಪೇಕ್ಷೆಯನ್ನು ಮುಂದಿಟ್ಟುಕೊಂಡು ಹೋರಾಟವನ್ನು ನಡೆಸುತ್ತಾ ಬಂದಿದೆ,ಹೈಕೋರ್ಟ್ ನ ಈ ತೀರ್ಪು ಹಿಂದೂ ಸಮಾಜದಲ್ಲಿ ಸಂತಸವನ್ನು ತಂದಿದೆ ಹಾಗೂ ಹಿಂದೂ ಸಮಾಜದ ನಂಬಿಕೆಗಳಿಗೆ ಬೆಲೆ ಸಿಕ್ಕಂತಾಗಿದೆ.ನ್ಯಾಯಾಲಯದ ಈ ತೀರ್ಪು ಹಿಂದೂ ಸಮಾಜದ ಗೆಲುವಾಗಿದೆ.ನ್ಯಾಯಾಲಯವು ನೀಡಿದ ತೀರ್ಪಿನಂತೆ ತಾವು ತಕ್ಷಣ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು ಹಾಗೂ ಡಿಸೆಂಬರ್ 18 ರಂದು ದತ್ತ ಜಯಂತಿಯ ಪ್ರಯುಕ್ತ ನಡೆಯುವ 3 ದಿನದ ಕಾರ್ಯಕ್ರಮಕ್ಕೆ ಸಂಪೂರ್ಣ ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ನಡೆಸಲು ಅನುವು ಮಾಡಿಕೊಡಬೇಕು ಹಾಗೂ ತಾವು ಕೂಡಾ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಜರಂಗದಳದ ಪರವಾಗಿ ಬಜರಂಗದಳ ರಾಜ್ಯ ಸಂಚಾಲಕರಾದ ಕೆ.ಆರ್.ಸುನಿಲ್ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದ್ದಾರೆ, ಮನವಿ.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ರಘು ಸಕಲೇಶಪುರ, ಮುರಳಿ ಕೃಷ್ಣ ಹಸಂತಡ್ಕ ಅವರು ಜೊತೆಗಿದ್ದರು.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

Ram Madhav’s Book The Hindutva Paradigm, launched in Bengaluru

Sun Oct 10 , 2021
October 9, 2021: The Hindutva Paradigm, a book in pursuit of Indic perspective of various subjects, written by well-known author & Member of Central Executive RSS, Shri Ram Madhav was launched in Bengaluru this evening by Dr. C N Ashwath Narayan, the Minister for Higher Education, IT-BT, S&T, Skill Development, […]