ರಾಷ್ಟ್ರೋತ್ಥಾನ ಪರಿಷತ್ ಆಯೋಜಿಸಿರುವ ವಿಶೇಷ ಕಾರ್ಯಕ್ರಮ : ‘ಕನ್ನಡ ಪುಸ್ತಕ ಹಬ್ಬ’

ಕರ್ನಾಟಕ ರಾಜ್ಯದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಗಳಲ್ಲೊಂದಾದ ರಾಷ್ಟ್ರೊತ್ಥಾನ ಸಾಹಿತ್ಯವು ಕಳೆದ 55ಕ್ಕೂ ಅಧಿಕ ವರ್ಷಗಳಿಂದ ನಮ್ಮ
ಸಂಸ್ಕೃತಿ, ಪರಂಪರೆ, ಇತಿಹಾಸ, ತತ್ವ, ಜ್ಞಾನ ಹಾಗೂ ಜೀವನಾದರ್ಶಗಳ ಹಿರಿಮೆಯನ್ನು ಸಾರುವಂತಹ ಪುಸ್ತಕಗಳನ್ನು ಪ್ರಕಟಿಸುತ್ತಾ ಬಂದಿದೆ. ರಾಷ್ಟ್ರೊತ್ಥಾನ ಸಾಹಿತ್ಯವು ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 2021, ಅಕ್ಟೋಬರ್ 30 ರಿಂದ ನವೆಂಬರ್ 28ರ ವರೆಗೆ ‘ಕನ್ನಡ ಪುಸ್ತಕ ಹಬ್ಬ’ ಎಂಬ 30 ದಿನಗಳ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಬೆಂಗಳೂರಿನ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ ಆವರಣದಲ್ಲಿರುವ ಕೇಶವಶಿಲ್ಪ ಸಭಾಂಗಣದಲ್ಲಿ ನಡೆಯಲಿದೆ.

‘ಕನ್ನಡ ಪುಸ್ತಕ ಹಬ್ಬ’ದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ವಾರಾಂತ್ಯದಲ್ಲಿ ವಿಶೇಷ ಉಪನ್ಯಾಸಗಳು, ಪುಸ್ತಕ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮವು ರಾಷ್ಟ್ರೋತ್ಥಾನ ಪರಿಷತ್ತಿನ ಅಧಿಕೃತ ಫೇಸ್‍ಬುಕ್ ಪೇಜ್ https://www.facebook.com/rashtrotthanaparishath ರಲ್ಲಿ ನೇರಪ್ರಸಾರವಾಗಲಿದೆ. ಕ್ರೀಡಾಪಟುಗಳು, ಸಾಹಿತಿಗಳು, ಕನ್ನಡ ಕಿರುತೆರೆ, ಬೆಳ್ಳಿತೆರೆಯ ನಟ-ನಟಿಯರು ಕಾರ್ಯಕ್ರಮಕ್ಕೆ ಭೇಟಿ ನೀಡಲಿದ್ದಾರೆ, ಖರೀದಿಸಿದ ಪುಸ್ತಕಗಳ
ಮೇಲೆ ಅವರ ಹಸ್ತಾಕ್ಷರವನ್ನು ಪಡೆದುಕೊಳ್ಳಬಹುದು.

ಪುಸ್ತಕ ಪ್ರದರ್ಶನದಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯ ಸೇರಿದಂತೆ ಸುಮಾರು 50 ಪ್ರಕಾಶನ ಸಂಸ್ಥೆಗಳ 3,000ಕ್ಕೂ ಅಧಿಕ ಶೀರ್ಷಿಕೆಗಳ ಪುಸ್ತಕಗಳು ಲಭ್ಯ ಇರಲಿವೆ. ರಾಷ್ಟ್ರೋತ್ಥಾನ ಸಾಹಿತ್ಯದ ಪುಸ್ತಕಗಳಿಗೆ ಶೇ. 40 ರಿಯಾಯಿತಿ ಹಾಗೂ ಇತರ ಪ್ರಕಾಶಕರ ಪುಸ್ತಕಗಳಿಗೆ ಶೇ. 20 ರಿಯಾಯಿತಿ ಇರುತ್ತದೆ. ಲೇಖಕರೊಂದಿಗೆ ಸಂವಾದ, ಲೇಖಕರ ಹಸ್ತಾಕ್ಷರದೊಂದಿಗೆ ಪುಸ್ತಕ ಖರೀದಿ ಹಾಗೂ ಲೇಖಕರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಅವಕಾಶವಿದೆ. ಪುಸ್ತಕ ಪ್ರದರ್ಶನವು ಅಕ್ಟೋಬರ್ 30 ರಿಂದ ನವೆಂಬರ್ 28ರ ವರೆಗೆ ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆದಿರುತ್ತದೆ. ಅಂತರ್ಜಾಲ ಮಳಿಗೆ https://www.sahityabooks.com/ ಯಲ್ಲಿಯೂ ರಿಯಾಯಿತಿ ಇರುತ್ತದೆ.

2021, ಅಕ್ಟೋಬರ್ 30 ರಂದು ‘ಕನ್ನಡ ಪುಸ್ತಕ ಹಬ್ಬ’ದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ|| ಬಿ.ವಿ. ವಸಂತಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲೇಖಕರು, ಕಾದಂಬರಿಕಾರ ಶ್ರೀ ಜೋಗಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಧಿಕೃತ ಫೇಸ್‍ಬುಕ್ ಪೇಜ್ https://www.facebook.com/rashtrotthanaparishath ರಲ್ಲಿ ನೇರಪ್ರಸಾರವಾಗಲಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಅ.ಭಾ.ಕಾ.ಮ. ನಿರ್ಣಯ: ಬಾಂಗ್ಲಾದೇಶದ ಹಿಂದುಗಳ ಮೇಲೆ ಇಸ್ಲಾಂ ಮೂಲಭೂತವಾದಿಗಳಿಂದ ನಡೆದ ಹಿಂಸೆಯ ಖಂಡನೆ

Fri Oct 29 , 2021
ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ಬಾಂಗ್ಲಾದೇಶದ ಹಿಂದುಗಳ ಮೇಲೆ ಇಸ್ಲಾಂ ಮೂಲಭೂತವಾದಿಗಳಿಂದ ನಡೆದ ಹಿಂಸೆಯನ್ನು ಖಂಡಿಸುತ್ತದೆ. ಅಭಾಕಾಮ ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆದ ಹಿಂಸೆಯನ್ನು ಬಲವಾಗಿ ಖಂಡಿಸುತ್ತದೆ. ಬಾಂಗ್ಲಾದೇಶವನ್ನು ಮತ್ತಷ್ಟು ಇಸ್ಲಾಮೀಕರಣಗೊಳಿಸಬೇಕು ಎಂಬ ಹುನ್ನಾರದಿಂದ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಮುಂದುವರಿಯುತ್ತಿರುವ ಬರ್ಬರತೆಯನ್ನು ಸಭೆಯು ಖಂಡಿಸುತ್ತದೆ. ಹಿಂದುಗಳು ಮತ್ತು ಹಿಂದೂ ದೇವಸ್ಥಾನಗಳ ಮೇಲಿನ ಆಕ್ರಮಣವು ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಲೇ ಇವೆ. ಇತ್ತೀಚಿಗೆ ದುರ್ಗಾ ಪೂಜೆಯ ಸಂದರ್ಭದಲ್ಲಿ ಸ್ಫೋಟಗೊಂಡ ಕೋಮು […]