2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿ ಆಚರಿಸುವ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಒಮ್ಮತದಿಂದ ಅಂಗೀಕರಿಸಲಾಗಿದೆ.

ಜೊತೆಗೆ ಭಾರತಕ್ಕೆ ಪ್ರಾಯೋಜಿತ ದೇಶವಾಗುವ ಗೌರವ ದೊರಕಿದೆ. ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ನಿರ್ಣಯ ವನ್ನು ಕೈಗೊಂಡ ಕುರಿತು ಮತ್ತು ಅದನ್ನು ಸಹ-ಪ್ರಾಯೋಜಿಸಿದ ಎಲ್ಲ ರಾಷ್ಟ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದು “ಸಿರಿಧಾನ್ಯ ಗಳನ್ನು ಜನಪ್ರಿಯಗೊಳಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂಬುದು ಗೌರವದ ವಿಷಯ. ಸಿರಿಧಾನ್ಯಗಳ ಸೇವನೆಯು ಪೋಷಣೆ, ಆಹಾರ ಸುರಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ರೈತರ ಕಲ್ಯಾಣಕ್ಕೆ ಪೂರಕವಾಗಿದೆ” ಎಂದು ತಿಳಿಸಿದ್ದಾರೆ.