• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪೂರ್ವನಿಯೋಜಿತ : ಸತ್ಯಶೋಧನಾ ಸಮಿತಿ ವರದಿ

Vishwa Samvada Kendra by Vishwa Samvada Kendra
September 4, 2020
in News Digest, Others
250
0
CFD submits to CM BSY the fact finding report of the recent D J Halli Riots
491
SHARES
1.4k
VIEWS
Share on FacebookShare on Twitter

ಬೆಂಗಳೂರು: ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯ ಇತ್ತೀಚಿನ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸತ್ಯಶೋಧನೆ ನಡೆಸಿದ್ದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀಕಾಂತ್ ಡಿ ಬಬಲಾದಿ ನೇತೃತ್ವದ ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ. “ಗಲಭೆಗಳನ್ನು ಮೊದಲೇ ಯೋಜಿಸಲಾಗಿತ್ತು, ಸಂಘಟಿಸಲಾಗಿತ್ತು ಮತ್ತು ಜನಸಮೂಹವು ಈ ಪ್ರದೇಶದ ಕೆಲವು ಪ್ರಮುಖ ಹಿಂದೂಗಳನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದೊಂಬಿ ನಡೆಸಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಿದೆ.

ಸಮಿತಿಯ ಸದಸ್ಯರು ಶುಕ್ರವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸತ್ಯಶೋಧನಾ ಸಮಿತಿ ವರದಿಯನ್ನು ಸಲ್ಲಿಸಿದರು. ಮುಖ್ಯಮಂತ್ರಿಗಳು  ಗೃಹ ಸಚಿವರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ನಗರದ ಇತರ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ.

READ ALSO

ಒಂದು ಪಠ್ಯ – ಹಲವು ಪಾಠ

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

ಸಂಪೂರ್ಣ ವರದಿಯನ್ನು ಇಲ್ಲಿ ಓದಬಹುದಾಗಿದೆ.

ಹಿಂಸಾಚಾರದ ವೇಳೆ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಯನ್ನು ಸುಟ್ಟು ಹಾಕಿದ್ದಾರೆ. ಪೊಲೀಸ್‌ ಠಾಣೆಯ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇದರ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶಿಸಿದೆ.

49 ಪುಟಗಳ ವರದಿಯು “ಇಡೀ ಘಟನೆಯು ರಾಜ್ಯದ ಸಾಮಾನ್ಯ ಜನರ ನಂಬಿಕೆಯನ್ನು ಕುಗ್ಗಿಸಲು ಉದ್ದೇಶಪೂರ್ವಕವಾಗಿ, ಪೂರ್ವ ನಿಯೋಜಿತವಾಗಿ ಮಾಡಿದ ಹಿಂಸಾಚಾರ” ಎಂದು ಹೇಳಿದೆ. ದೇಗುಲವನ್ನು ರಕ್ಷಣೆ ಮಾಡುವಂತೆ ಮಾನವ ಸರಪಳಿ ರಚನೆ ಮಾಡಿದ್ದು, ಅವರನ್ನು ಅವರು ಉಳಿಸಿಕೊಳ್ಳಲು ನಡೆಸಿದ ಪ್ರಯತ್ನ. ಮಾಧ್ಯಮಗಳಿಗೆ ತಮ್ಮ ಕಪಟ ಮಾನವೀಯತೆ ತೋರಿಸಲು ಮಾಡಿದ ಪ್ರಯತ್ನ ಎಂದಿದೆ.

ಸತ್ಯಶೋಧನಾ ಸಮಿತಿಯು ಹಲವಾರು ಸಂತ್ರಸ್ತರು, ಪೊಲೀಸರು ಮತ್ತು ಪ್ರದೇಶದ ಪ್ರಮುಖ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ ಈ ವರದಿಯನ್ನು ಸಿದ್ಧಪಡಿಸಿದೆ. ನಿವೃತ್ತ ಅಧಿಕಾರಿಗಳು, ಪತ್ರಕರ್ತರು, ವಕೀಲರು, ಪ್ರಾಧ್ಯಾಪಕರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಈ ಸಮಿತಿಯು ಒಳಗೊಂಡಿದೆ.

ಎಫ್ಐಆರ್ ಮತ್ತು ಸಂತ್ರಸ್ತರ ಜೊತೆಗಿನ ಮಾತುಕತೆಯಿಂದ ಹಿಂಸಾಚಾರದಲ್ಲಿ ಸ್ಥಳೀಯ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಹೇಳಿದೆ.

ಕೇವಲ ಸ್ಥಳೀಯರು ಹಿಂಸಾಚಾರವನ್ನು ಯೋಜಿಸುವುದರಲ್ಲಿ ಭಾಗಿಯಾಗಿದ್ದು ಮಾತ್ರವಲ್ಲದೆ, ಘಟನೆಯ ಸಂಪೂರ್ಣ ಮಾಹಿತಿಯನ್ನು ಮೊದಲೇ ತಿಳಿದುಕೊಂಡಿದ್ದರು. ಈ ಘಟನೆಯನ್ನು ರಾಜಕೀಯ ಪ್ರೇರಿತ ಎಂಬಂತೆ ಬಿಂಬಿಸಲು ಪ್ರಯತ್ನ ನಡೆಸಲಾಗುತ್ತಿದೆ, ಆದರೆ ಇದು ಕೋಮು ಪ್ರಚೋದನೆಯಿಂದ ಉಂಟಾದ ಘಟನೆ ಎಂದು ಸಮಿತಿ ಹೇಳಿದೆ.

ಪಿಎಫ್ಐ ಮತ್ತು ಎಸ್‌ಡಿಪಿಐ ಹಿಂಸಾಚಾರವನ್ನು ಯೋಜಿಸುವಲ್ಲಿ ಮತ್ತು ಅದನ್ನು ಕಾರ್ಯಗತಗೊಳಿಸುವಲ್ಲಿ ನೇರವಾಗಿ ಭಾಗಿಯಾಗಿದೆ ಎಂದು ಸಮಿತಿ ಆರೋಪಿಸಿದೆ.

ಶಿಫಾರಸ್ಸುಗಳು

  • ಅವಲೋಕನಗಳ ಆಧಾರದ ಮೇಲೆ, ಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕುವ ಮೂಲಕ ಆಸ್ತಿಪಾಸ್ತಿ ನಷ್ಟವನ್ನು ಭರಿಸಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.
  • ಈ ಘಟನೆಯನ್ನು ಸಮಗ್ರವಾಗಿ ತನಿಖೆ ಮಾಡಬೇಕು ಮತ್ತು ಘಟನೆ ಸ್ಥಳೀಯವೆಂದು ಪರಿಗಣಿಸಬಾರದು.
  • ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಮತೀಯ ತೀವ್ರವಾದಿ ಸಂಘಟನೆಗಳಿಂದ ಹರಿದು ಬಂದ ಹಣವನ್ನು ಎನ್‌ಐಎ ತನಿಖೆ ಮೂಲಕ ಪತ್ತೆ ಹಚ್ಚಬೇಕು.
  • ಯಾವುದೇ ಧರ್ಮ, ಜನಾಂಗ, ವರ್ಗ, ಪಂಥ ಇತ್ಯಾದಿಗಳ ವಿರುದ್ಧ ದ್ವೇಷ ಸಾಧಿಸಲು ಸಾಮಾಜಿಕ ಮಾಧ್ಯಮವನ್ನು ಬಳಸದಂತೆ ಖಚಿತಪಡಿಸಿಕೊಳ್ಳಲು ಸೈಬರ್ ಡೋಮ್‌  ಸ್ಥಾಪಿಸಬೇಕು‌.
  • ಡ್ರಗ್ಸ್‌ ದಂಧೆಯನ್ನು ಸಂಪೂರ್ಣ ಮಟ್ಟ ಹಾಕಬೇಕು.




ಸಂಪೂರ್ಣ ವರದಿಯನ್ನು ಇಲ್ಲಿ ಓದಬಹುದಾಗಿದೆ.

  • email
  • facebook
  • twitter
  • google+
  • WhatsApp
Tags: Citizens for DemocracyDJHalliFact finding committeePUlakeshinagar

Related Posts

Articles

ಒಂದು ಪಠ್ಯ – ಹಲವು ಪಾಠ

May 25, 2022
News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
Next Post
A Garland Of Inspiring Anecdotes From The Life Of Dr. S. Radhakrishnan

A Garland Of Inspiring Anecdotes From The Life Of Dr. S. Radhakrishnan

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಒಂದು ಪಠ್ಯ – ಹಲವು ಪಾಠ

May 25, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

Creator of Indian Comics Anant Pai expires

Creator of Indian Comics Anant Pai expires

February 26, 2011
Cow Butchered within temple premises in Kerala: Situation Tense

Cow Butchered within temple premises in Kerala: Situation Tense

January 17, 2012
196 out of 255 in Davanagere cured of Covid19 vide medicine guidelines of Ayush department

196 out of 255 in Davanagere cured of Covid19 vide medicine guidelines of Ayush department

July 10, 2020
ದಾವಣಗೆರೆ: ಚಿಲ್ಲರೆ ವ್ಯಾಪರಕ್ಕೆ ವಿದೇಶಿ ಬ೦ಡವಾಳ ವರವೋ? ಶಾಪವೋ?- ವಿಚಾರ ಸ೦ಕಿರಣ

ದಾವಣಗೆರೆ: ಚಿಲ್ಲರೆ ವ್ಯಾಪರಕ್ಕೆ ವಿದೇಶಿ ಬ೦ಡವಾಳ ವರವೋ? ಶಾಪವೋ?- ವಿಚಾರ ಸ೦ಕಿರಣ

January 12, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ
  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In