• Samvada
  • Videos
  • Categories
  • Events
  • About Us
  • Contact Us
Tuesday, June 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ಮತ್ತೆ ನೆನಪಾಗುವ ಅಮರ ಸೇನಾನಿ-ನೇತಾಜಿ ಬೋಸ್

Vishwa Samvada Kendra by Vishwa Samvada Kendra
January 17, 2011
in Articles
250
0
ಮತ್ತೆ ನೆನಪಾಗುವ ಅಮರ ಸೇನಾನಿ-ನೇತಾಜಿ ಬೋಸ್
491
SHARES
1.4k
VIEWS
Share on FacebookShare on Twitter

ಜನವರಿ ೨೩ರಂದು ಭಾರತ ಕಂಡ ಅಸಾಮಾನ್ಯ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್‌ರ ೧೧೩ನೇ ಜಯಂತಿ. ಸ್ವರಾಜ್ಯ ಚಳುವಳಿಯ ಅನೇಕ ನಾಯಕರಿಂದ ವ್ಯಂಗ್ಯ- ವಿರೋಧಗಳನ್ನೆದುರಿಸಿದರೂ, ಹಿಮಾಲಯದೆತ್ತರ ಧೈರ್ಯ-ಸಾಹಸ ತೋರಿ, ಲಕ್ಷಾಂತರ ಯುವಕರಿಗೆ ಸ್ಫೂರ್ತಿತುಂಬಿದ ಈ ಅಮರಸೇನಾನಿಯ ಜೀವನಗಾಥೆಯ ಒಂದು ಮೆಲುಕು ಇಲ್ಲಿದೆ.

(ಜನವರಿ 23, 1897 – ಆಗಸ್ಟ್ 18, 1945)

”ನಾ ನು ಗಾಂಧೀಜಿ ಮುಂತಾದವರ ಬದಲಾಗಿ ಸುಭಾಷ್‌ಚಂದ್ರ ಬೋಸರೊಡನೆ ಮಾತುಕತೆ ನಡೆಸ ಬೇಕಾಗಿದ್ದಿದ್ದಲ್ಲಿ ನಮಗೆ ಪಾಕಿಸ್ತಾನ ದಕ್ಕುತ್ತಲೇ ಇರಲಿಲ್ಲ!, ಎಂದು ಮಹಮ್ಮದ್ ಅಲಿ ಜಿನ್ನಾ ಹೇಳಿದ್ದರು, ದಾಖಲೆ ಇದೆ.”

ಐಎನ್‌ಎಯ ಪ್ರಮುಖರಲ್ಲೊಬ್ಬರೂ, ಸುಭಾಷ್‌ರ ಒಡನಾಡಿಯೂ ಆಗಿದ್ದ ೮೩ವರ್ಷದ ಕ್ಯಾಪ್ಟನ್ ಎಸ್.ಎಸ್. ಯಾದವ್ ೧೯೯೫, ಡಿಸೆಂಬರ್ ೧೭ರಂದು ಸಿಂಗಾಪುರದಲ್ಲಿ ನಡೆದ ಇಂಡಿಯನ್ ನ್ಯಾಷನಲ್ ಆರ್ಮಿಯ ಭಾರತಾಭಿಮುಖ ಯಾತ್ರೆಯ ೫೦ನೇ ವರ್ಷಾಚರಣೆಯಲ್ಲಿ ಹೇಳಿದ ಮಾತಿದು.

READ ALSO

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

ದೇಶದ ಸುರಕ್ಷತೆಗಾಗಿ ಅಗ್ನಿಪಥ!

ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬ ಸುಭಾಷ್‌ರ ದಿಟ್ಟನಿಲುವಿನ ಪ್ರತಿಧ್ವನಿಯಾಗಿತ್ತು ಆ ಮಾತು. ಕಾಂಗ್ರೆಸ್‌ನ ಬಲಹೀನ ನಾಯಕತ್ವ, ದುರ್ಬಲ ಒಪ್ಪಂದಗಳು, ಸ್ವಾಭಿಮಾನಶೂನ್ಯ ವರ್ತನೆಗೆ ಪ್ರತಿಯಾಗಿ ಆತ್ಮಾಭಿಮಾನದ ಸ್ವರಾಜ್ಯಹೋರಾಟಕ್ಕೆ ಬಲತುಂಬಿದವರು ಸುಭಾಷರು. ತಾನು ಕಷ್ಟಪಟ್ಟುಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸ್‌ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ. ಶೀಘ್ರ ಸ್ವಾತಂತ್ರ್ಯಪ್ರಾಪ್ತಿಗಾಗಿ ಅವರು ಮಂಡಿಸುತ್ತಿದ್ದ ವಾದಗಳು, ಅದಕ್ಕಾಗಿ ಶ್ರಮಿಸಬೇಕಾದ ತ್ವರಿತ ಸಿದ್ಧತೆಗಳ ಕುರಿತು ಬೋಸ್‌ರ ನಿಲುವುಗಳೆಲ್ಲ ಕಾಂಗ್ರೆಸ್‌ನ ಮಂದಗಾಮಿ ಗುಂಪಿಗೆ ಅಸಹ್ಯವಾಗಿತ್ತು. ಸ್ವತಃ ಗಾಂಧೀಜಿಯವರೇ ಹಲವು ಬಾರಿ ಬೋಸ್‌ರನ್ನು ಟೀಕಿಸಿದ್ದರು! ಅವರಿಗೆ ದೂರಗಾಮಿ ಚಿಂತನೆ ಇಲ್ಲ ಎಂಬ ಆರೋಪ. ಆದರೆ ೧೯೩೮ರಲ್ಲಿ ಭಾರತದ ವಿಭಜನೆಯ ಮುಸ್ಲಿಂಲೀಗ್- ಬ್ರಿಟಿಷರ ತಂತ್ರಗಾರಿಕೆಯ ಕುರಿತು ಮೊದಲಬಾರಿಗೆ ಬಹಿರಂಗವಾಗಿ ಎಚ್ಚರಿಸಿದರೂ ಮಂದಗಾಮಿಗಳಿಗೆ ಕೇಳಿಸಲಿಲ್ಲ. ಪರಿಣಾಮವಾಗಿ ೯ ವರ್ಷದಲ್ಲೇ ದೇಶ ಹೋಳಾಯಿತು! ಬೋಸ್‌ರ ದೂರಗಾಮಿ ಚಿಂತನೆಗಳಿಗೂ ಕವಡೆ ಕಿಮ್ಮತ್ತಿನ ಬೆಲೆ ಕೊಡದ ಕಾಂಗ್ರೆಸ್‌ನಿಂದ ಸ್ವತಃ ಹೊರಬಂದವರು ಬೋಸ್.

Mahatma Gandhi-Subhash Chandra Bose
Mahatma Gandhi-Subhash Chandra Bose

ಕೇವಲ ೪೮ವರ್ಷದ ಅಲ್ಪಾಯಸ್ಸಿನಲ್ಲಿ ಇತಿಹಾಸಾರ್ಹ ಸಾಧನೆಗೈದ ನೇತಾಜಿ, ಕ್ರಾಂತಿಮಾರ್ಗದ ವೇಳೆಯಲ್ಲೂ ವಿವೇಕಾನಂದ – ಅರವಿಂದರಿಂದ ಪಡೆದ ಆಧ್ಯಾತ್ಮನಿಷ್ಠೆಯನ್ನು ಮೈಗೂಡಿಸಿಕೊಂಡವರು. ’ಕ್ರಾಂತಿಕಾರಿ’ ಎಂಬ ಶಬ್ದಕ್ಕೆ ಅನೇಕ ಅಪಾರ್ಥಗಳನ್ನು ಹಚ್ಚಿ ವ್ಯಂಗ್ಯ ಮಾಡಿದಾಗಲೂ ಕ್ರಾಂತಿಯೆಂದರೇನು? ಕ್ರಾಂತಿಕಾರಿ ಯಾರು? ಎಂಬ ಕುರಿತು ವಿವರವಾಗಿ ಭಾಷಣಗಳಲ್ಲಿ ಉಲ್ಲೇಖಿಸಿದ್ದರು. ಅಭಿಪ್ರಾಯ ಭಿನ್ನತೆಯಿದ್ದರೂ ಬೋಸ್‌ರ ದೇಶಭಕ್ತಿ, ಸ್ವಾತಂತ್ರ್ಯ ನಿಷ್ಠೆಕುರಿತು ಗಾಂಧೀಜಿ ಹಾಗೂ ಅನುಯಾಯಿಗಳಿಗೆ ಅಪಾರ ಗೌರವವಿತ್ತು. ಆದರೇನು ಫಲ? ಬೋಸರಿಗೆ ಹೆಗಲುಕೊಡುವ, ಅವರ ಮನೋಜ್ಞ, ನಿರ್ಣಾಯಕ ಹಾಗು ಸ್ಪಷ್ಟ ಹೋರಾಟಗಳ ರೂಪುರೇಷೆಗಳಿಗೆ ಬೆಂಬಲ ವ್ಯಕ್ತವಾಗದೇ ಹೋದದ್ದು ದುರಂತ.

ಏನೇ ಆದರೂ, ಸುಭಾಷರು ನಾಡುಕಂಡ ಶ್ರೇಷ್ಠ ಸ್ವರಾಜ್ಯ ಹೋರಾಟಗಾರರಲ್ಲಿ ಒಬ್ಬರು. ಭಾರತದ ಸೈನ್ಯಬಲದ ಕುರಿತು, ಗಡಿ ರಕ್ಷಣೆ ಕುರಿತು ಅವರಿಗಿದ್ದ ದೃಷ್ಟಿಕೋನ ಇಂದಿನವರೆಗೂ ಯಾವುದೇ ರಕ್ಷಣಾ ಸಚಿವರಿಗೆ ಅರ್ಥವಾಗಿಲ್ಲ. ತಂತ್ರಜ್ಞಾನದ ಆವಿಷ್ಕಾರಗಳು ಇನ್ನೂ ಪೂರ್ತಿ ರೆಪ್ಪೆ ತೆರೆಯದಿದ್ದಾಗಲೂ ಬೋಸ್‌ರ ರಾಷ್ಟ್ರೀಯ ಸಧೃಢತೆಯ ಚಿಂತನೆ ಅದೆಷ್ಟು ಪ್ರಖರವಾಗಿತ್ತು! ಇಂದಿಗೂ ನಮ್ಮ ಗಡಿಗಳ, ಸೈನ್ಯದ ಕುರಿತ ಕಾಂಗ್ರೆಸ್‌ನ ಅಸಡ್ಡೆ ಮುಂದುವರೆದಿದೆ.

ಬೋಸ್‌ರಂತಹ ಮಹಾನ್ ರಾಷ್ಟ್ರನಾಯಕನ ಜೀವನದ ಘಟನೆಗಳ ಮೆಲುಕೇ ಸ್ಫೂರ್ತಿಯುತ. ಕಲಿಯಬೇಕಾದ ಪಾಠಗಳೂ ಹತ್ತಾರು. ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದ್ದ ಬೋಸರು ರಾಷ್ಟಕ್ಕೇ ದಿಗ್ದರ್ಶನ ಮಾಡಿದವರು. ಆ ಧೀಮಂತ ನಾಯಕನ ಜೀವನದಿಂದ ಸಿಗುವ ಅಖಂಡ ಪ್ರೇರಣೆ ಯುವಜನತೆಗೆ ದಾರಿದೀಪವಾಗಲಿ.

  • ಸುಭಾಷ್‌ಚಂದ್ರ ಬೋಸ್ ಜನಿಸಿದ್ದು ೧೮೯೭ರ ಜನವರಿ ೨೩ರಂದು, ಒರಿಸ್ಸಾದ ಕಟಕ್‌ನಲ್ಲಿ. ತಂದೆ ಜಾನಕೀನಾಥ ಬೋಸ್, ತಾಯಿ ಪ್ರಭಾವತಿ. ಆ ದಂಪತಿಗಳ ೯ ಮಕ್ಕಳಲ್ಲಿ ಸುಭಾಷ್ ೬ನೇ ಯವರು.
  • ಕಟಕ್‌ನಲ್ಲಿ ರ‍್ಯಾವೆನ್‌ಶಾ ಕೊಲಿಜಿಯೇಟ್ ಶಾಲೆಯಲ್ಲಿ ಪ್ರಾಥಮಿಕ ವ್ಯಾಸಂಗ, ಅಲ್ಲಿ ಮುಖ್ಯೋಪಾಧ್ಯಾಯ ಬೇಣಿಮಾಧವದಾಸ್‌ರ ರಿಂದ ಪ್ರೇರಣೆ, ಮುಂದೆ ವಿವೇಕಾನಂದರ ಸಾಹಿತ್ಯಗಳು, ಪತ್ರಗಳು ಮತ್ತು ’ಕೊಲೊಂಬೋದಿಂದ ಆಲ್ಮೋರಾಕ್ಕೆ’ ಉಪನ್ಯಾಸಗಳಿಂದ ಪ್ರಭಾವಿತರಾದ ಬೋಸರು ಅರವಿಂದರ ’ಆರ್ಯ’ ಮಾಸಪತ್ರಿಕೆಯ ತಪ್ಪದ ಓದುಗ!
  • ೧೯೧೯ರಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಬಿ.ಎ. ಪದವಿ, ನಂತರ ೧೯೧೯ರ ಸೆಪ್ಟೆಂಬರ್ ೧೫ರಂದು ಐ.ಸಿ.ಎಸ್ ಪರೀಕ್ಷೆಗಾಗಿ ಇಂಗ್ಲೆಂಡಿಗೆ ಪಯಣ. ೧೯೨೦ರ ಸೆಪ್ಟಂಬರ್‌ನಲ್ಲಿ ನಾಲ್ಕನೇ ಸ್ಥಾನಿಗರಾಗಿ ಐ.ಸಿ.ಎಸ್ ಪದವಿ ಪ್ರಾಪ್ತಿ.
  • ವಿದೇಶೀ ನೌಕರಿ ಒಲ್ಲೆ ಎಂದು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನು ೧೯೨೧ರ ಎಪ್ರಿಲ್ ೨೨ರಂದು ಬ್ರಿಟಿಷ್ ಸರ್ಕಾರದ ಭಾರತ ವ್ಯವಹಾರ ಸಚಿವ ಎಡ್ವಿನ್ ಮಾಂಟೆಗುಗೆ ಪತ್ರವೊಂದನ್ನು ಬರೆದು ಮರಳಿಸಿದ್ದರು ಬೋಸ್! ೨೦ ತಿಂಗಳ ಇಂಗ್ಲೆಂಡ್ ವಾಸದ ನಂತರ ೧೯೨೧ರ ಜುಲೈ ೧೬ರಂದು ಮುಂಬಯಿಗೆ ಮರಳಿದರು ಬೋಸ್. ಅಂದೇ ಗಾಂಧೀಜಿ ಜತೆ ಮೊದಲ ಭೇಟಿ.
  • ೧೯೨೧ರ ಆಗಸ್ಟ್‌ನಿಂದ ಚಿತ್ತರಂಜನ್‌ದಾಸ್‌ರ ಮಾರ್ಗದರ್ಶನದಲ್ಲಿ ಯುವಕರ ಸಂಘಟನೆಗೆ ಆದ್ಯತೆ. ಚಳುವಳಿಯ ಸಂದರ್ಭವೊಂದರಲ್ಲಿ ಮ್ಯಾಜಿಸ್ಟ್ರೇಟರು ೬ ತಿಂಗಳ ಸಜೆ ಘೋಷಿಸಿದಾಗ ’ಬರಿಯ ೬ ತಿಂಗಳೇ? ನನ್ನದೇನು ಕೋಳಿಕದ್ದ ಅಪರಾಧವೇ?’ ಎಂದಿದ್ದರು ಬೋಸ್!
  • ಕಾಂಗ್ರೆಸ್‌ನ ಡೋಲಾಯಮಾನ ನೀತಿಗಳಿಗೆ ಬೇಸತ್ತು ಚಿತ್ತರಂಜನ್‌ದಾಸ್‌ರಿಂದ ’ಸ್ವರಾಜ್ಯಪಕ್ಷ ಸ್ಥಾಪನೆ. ಬೋಸ್‌ರು ದಾಸ್‌ರ ಜತೆಗೇ ಚಟುವಟಿಕೆಗಳಲ್ಲಿ ಭಾಗಿ. ೧೯೨೩ರ ಅಕ್ಟೋಬರ್‌ನಿಂದ ದಾಸ್‌ರು ಸ್ಥಾಪಿಸಿದ್ದ ’ಫಾರ್ವರ್ಡ್’ ದಿನಪತ್ರಿಕೆಯ ನಿರ್ವಹಣೆಯ ಜವಾಬ್ದಾರಿ. ೧೯೨೫ರ ಜೂನ್ ೧೬, ದಾಸ್‌ರ ನಿಧನ, ಕ್ರಾಂತಿಕಾರಿ ಚಟುವಟಿಕೆಗಳಿಗಾಗಿ ಬೋಸ್‌ರ ಬಂಧನ, ಬಿಡುಗಡೆ.
  • ೧೯೨೭ರ ನವೆಂಬರ್‌ನಲ್ಲಿ ಬಂಗಾಳಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆ, ಆದರೆ ಗಾಂಧಿ ಪ್ರಣೀತ ಮಂದ ಮಾರ್ಗಕ್ಕಿಂತ ಸುಭಾಷ್‌ರದು ತೀರಾ ಭಿನ್ನ ಎಂಬುದು ಕ್ರಮೇಣ ಗೊತ್ತಾಯಿತು. ಹತ್ತಾರು ಚಳುವಳಿಗೆ ನೇತೃತ್ವ, ಅಖಿಲಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆ.
  • ೧೯೩೩, ಫೆಬ್ರವರಿ ೨೩ರಂದು ಯೂರೋಪಿನಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಪರ ಅಭಿಯಾನ. ಇಂಗ್ಲೆಂಡ್, ಆಸ್ಟ್ರಿಯಾ, ಇಟೆಲಿ ವಿಯೆನ್ನಾಗಳ ಭೇಟಿ, ತ್ವರಿತಗತಿಯ ಪ್ರವಾಸ, ಮಿಂಚಿನ ಓಡಾಟ. ಸ್ವಿಟ್ಜರ್ಲೆಂಡ್, ಚೆಕೋಸ್ಲೋವಾಕಿಯಾ, ಪೋಲೆಂಡ್, ಜರ್ಮನಿಗಳಲ್ಲಿ ಭಾರತದ ಪರ ಪ್ರಚಾರ. ಇಟೆಲಿ ಪ್ರಧಾನಿ ಬೆನಿತೋ ಮುಸ್ಸೋಲಿನಿ ಜತೆ ಚರ್ಚೆ. ೧೯೩೬ ಏಪ್ರಿಲ್ ೮ರಂದು ಮರಳಿ ಭಾರತಕ್ಕೆ, ಬಂದರಲ್ಲೇ ಬಂಧನ. ೧೯೩೭ರಲ್ಲಿ ಮತ್ತೆ ಆಸ್ಟ್ರಿಯಾ ಪಯಣ.
  • ಕಾಂಗ್ರೆಸ್‌ನ ಅಖಿಲಭಾರತ ಅಧಿವೇಶನದ ಅಧ್ಯಕ್ಷತೆ ೧೯೩೮ರ ಫೆಬ್ರವರಿ ೧೯ರಂದು, ಹರಿಪುರದಲ್ಲಿ. ವಿದೇಶೀ ನೆಲಗಳ ಓಡಾಟದಿಂದ ಪಡೆದ ರಾಜಕೀಯ ಅನುಭವ-ಒಳನೋಟಗಳಿಂದ ಬ್ರಿಟಿಷರ ಒಡೆದು ಆಳುವನೀತಿಕುರಿತ ಕ್ಷಾತ್ರತೇಜದ ಐತಿಹಾಸಿಕ ಭಾಷಣ, ದೇಶ ವಿಭಜನೆಯ ಬ್ರಿಟಿಷರ ತಂತ್ರದ ಸೂಚನೆ. ಮುಂದಿನ ೯ ವರ್ಷದಲ್ಲೇ ಸತ್ಯವಾದ ಬೋಸ್ ಭವಿಷ್ಯವಾಣಿ! ಆರೆಸ್ಸೆಸ್‌ನ ’ಸಂಘ ಶಿಕ್ಷಾವರ್ಗ’ ಶಿಬಿರಕ್ಕೆ ೧೯೩೮ರಲ್ಲಿ ಭೇಟಿಗೆ ಒಪ್ಪಿಗೆ, ಸಂಘದ ಧ್ಯೇಯ – ಅನುಶಾಸನ ಕಾರ‍್ಯಪದ್ಧತಿ ಕುರಿತ ಶ್ಲಾಘನೆ. ಆದರೆ ಕಾರಣಾಂತರಗಳಿಂದ ಭೇಟಿ ಸಾಧ್ಯವಾಗಲಿಲ್ಲ.
  • ಕಾಂಗ್ರೆಸ್ ಅಧ್ಯಕ್ಷಗಾದಿಗೆ ನಡೆದ ಮೊತ್ತಮೊದಲ ಚುನಾವಣೆಯಲ್ಲಿ ಡಾ|| ಪಟ್ಟಾಭಿ ಸೀತಾರಾಮಯ್ಯರ ವಿರುದ್ಧ ೨೧೫ ಮತಗಳ ಗೆಲುವು! ಸುಭಾಷ್ ವಿರುದ್ಧ ಹಲವಾರು ಟೀಕೆಗಳು, ಅನಗತ್ಯ ಋಣಾತ್ಮಕ ಮಾತುಗಳು ಗಾಂಧೀಜಿಯಿಂದ. ಸ್ವಾತಂತ್ರ್ಯದ ಮೋಡಗಳು ಸಮೀಪ ಇರುವಂತೆಯೇ ಬ್ರಿಟಿಷ್ ಸರ್ಕಾರದ ಜತೆ ದುರ್ಬಲ ಕಾಂಗ್ರೆಸ್‌ನ ತಾರ್ಕಿಕ ನಡೆಗಳಿಂದ ಬೇಸತ್ತು ಕಾಂಗ್ರೆಸ್‌ಗೆ ರಾಜೀನಾಮೆ, ’ಫಾರ್‌ವರ್ಡ್ ಬ್ಲಾಕ್’ ಸ್ಥಾಪನೆ.
  • ೧೯೪೦, ಜೂನ್ ೧೮ರಂದು ಡಾ|| ಹೆಡಗೇವಾರ್ ಜತೆ ಭೇಟಿ ಆದರೆ ತೀವ್ರ ಜ್ವರದಿಂದ ಹಾಸಿಗೆ ಹಿಡಿದಿದ್ದ ಡಾ|| ಹೆಡಗೇವಾರ್ ಜತೆ ಸಾಧ್ಯವಾಗದ ಮಾತುಕತೆ. ಮೂರೇದಿನದಲ್ಲಿ ಡಾ|| ಹೆಡಗೇವಾರ್ ನಿಧನ. ಕೈ ತಪ್ಪಿದ ಮಹಾಮಿಲನ. ನಂತರ ವೀರ ಸಾವರ್ಕರ್ ಭೇಟಿ.
  • ’ಬೋಸ್ ಕಾಣೆಯಾಗಿದ್ದಾರೆ’ ಎಂಬ ಸುದ್ದಿ ೧೯೪೧ ಜನವರಿ ೨೬ಕ್ಕೆ! ಕಾಬೂಲ್ ಮೂಲಕ ಬರ್ಲಿನ್ ಸೇರಿದ ಬೋಸ್‌ರಿಂದ ಸೈನಿಕ ಕಾರ‍್ಯಾಚರಣೆ. ’ಫ್ರೀ ಇಂಡಿಯಾ ಸೆಂಟರ್’ ೧೯೪೧, ನವೆಂಬರ್ ೨ಕ್ಕೆ ಉದ್ಘಾಟನೆ, ’ಆಜಾದ್ ಹಿಂದ್’ ಲಾಂಛನ, ’ಜೈಹಿಂದ್’ ಘೋಷಣೆ, ಬೋಸರಿಗೆ ’ನೇತಾಜಿ’ ಬಿರುದು.
  • ಜರ್ಮನ್ ಸೇನಾಕೇಂದ್ರಗಳಿಗೆ ಸೈನಿಕ ತರಬೇತಿ, ಬರ್ಲಿನ್ ರೇಡಿಯೋದಲ್ಲಿ ಆಗಾಗ ಭಾಷಣ, ಹಿಟ್ಲರ್ ಜತೆ ಭೇಟಿ. ಜಪಾನ್‌ಗೆ ತೆರಳಿ ಅಲ್ಲಿಂದ ಪೂರ್ವಾಂಚಲ ಭಾರತದ ಗಡಿಗಳಲ್ಲಿ ಸೈನ್ಯ ಸಜ್ಜು ಮಾಡಲು ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮೂಲಕ ಭೂಗತ ಚಟುವಟಿಕೆ.
  • ಬಲಿಷ್ಠಗೊಂಡ ಆಜಾದ್ ಹಿಂದ್ ಸೇನೆಗೆ ದೌಡಾಯಿಸುತ್ತಿದ್ದ ನಿವೃತ್ತಯುದ್ಧ ಕೈದಿಗಳು. ಮುಂದಿನ ದಿನಗಳಲ್ಲಿ ಪಕ್ವ ಸೈನ್ಯವಾಗಿ ರೂಪುಗೊಂಡ ಇಂಡಿಯನ್ ನ್ಯಾಷನಲ್ ಆರ್ಮಿ (ಐ.ಎನ್.ಎ). ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಪಡೆದ ಬೋಸ್‌ರಿಂದ ಆರ್ಜೀ-ಹುಕುಮಂತ್-ಎ-ಆಜಾದ್ ಹಿಂದ್ (ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ) ಸ್ಥಾಪನೆ; ಐಎನ್‌ಎಯ ಕಮಾಂಡರ್ ಇನ್ ಚೀಫ್ ಆಗಿ ಬೋಸ್.
  • ೧೯೪೫ರ ಆಗಸ್ಟ್ ೧೮ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್‌ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನ. ಆ ಕುರಿತು ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇದೆ. ಅನ್ವೇಷಣಾ ಸಮಿತಿ ನೇಮಿಸಿದರೂ, ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದಾರೆಂದೇ, ತಿಳಿದಿದ್ದರು.
  • ಬೋಸರು ಆಗಾಗ ಹೇಳುತ್ತಿದ್ದರು ’ನೀವು ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂಕೊಡುವಂಥ ಸರಕಲ್ಲ ಅದು ನಾವು ಪಡೆದುಕೊಳ್ಳಬೇಕಾದದ್ದು!’
  • (ರಾಜೇಶ್ ಪದ್ಮಾರ್ , ಬೆಂಗಳೂರು)
  • email
  • facebook
  • twitter
  • google+
  • WhatsApp

Related Posts

Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
Articles

ದೇಶದ ಸುರಕ್ಷತೆಗಾಗಿ ಅಗ್ನಿಪಥ!

June 18, 2022
Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 27, 2022
Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Next Post

The on-going loot of Hindu temples

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022
ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

April 14, 2021
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015

ಒಂದು ಪಠ್ಯ – ಹಲವು ಪಾಠ

May 27, 2022
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011

EDITOR'S PICK

Full text of Speech by RSS Sarasanghachalak Mohan Bhagwat at Bhubaneshwar, Orissa

Full text of Speech by RSS Sarasanghachalak Mohan Bhagwat at Bhubaneshwar, Orissa

August 11, 2014
ಶಿವಕುಮಾರ ಸ್ವಾಮೀಜಿಯವರಿಗೆ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೌರವ

ಶಿವಕುಮಾರ ಸ್ವಾಮೀಜಿಯವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೌರವ

May 10, 2012
ಹುಬ್ಬಳ್ಳಿ: RSS ಪ್ರಾಂತ ಕಾರ್ಯಾಲಯ ಕೇಶವಕುಂಜ ಭವನದಲ್ಲಿ ‘ಬೇಂದ್ರೆ ಗ್ರಂಥಾಲಯ’ ಉದ್ಘಾಟನೆ

ಹುಬ್ಬಳ್ಳಿ: RSS ಪ್ರಾಂತ ಕಾರ್ಯಾಲಯ ಕೇಶವಕುಂಜ ಭವನದಲ್ಲಿ ‘ಬೇಂದ್ರೆ ಗ್ರಂಥಾಲಯ’ ಉದ್ಘಾಟನೆ

November 23, 2015
7 Poor students clear IIT-JEE via ‘TAPAS’ ; a unique initiative of Rashtrotthana Parishat, Bangalore

7 Poor students clear IIT-JEE via ‘TAPAS’ ; a unique initiative of Rashtrotthana Parishat, Bangalore

June 28, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In