• Samvada
  • Videos
  • Categories
  • Events
  • About Us
  • Contact Us
Saturday, March 25, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Organisation Profiles

RASHTRA SEVIKA SAMITI – ರಾಷ್ಟ್ರಸೇವಿಕಾ ಸಮಿತಿ

Vishwa Samvada Kendra by Vishwa Samvada Kendra
August 3, 2016
in Organisation Profiles
252
0
RASHTRA SEVIKA SAMITI – ರಾಷ್ಟ್ರಸೇವಿಕಾ ಸಮಿತಿ
504
SHARES
1.4k
VIEWS
Share on FacebookShare on Twitter

ರಾಷ್ಟ್ರ ಸೇವಿಕಾ ಸಮಿತಿ

ಹಿಂದೂ ರಾಷ್ಟ್ರದ ಪುನರ್ನಿರ್ಮಾಣದ ಉದ್ದೇಶವನ್ನಿಟ್ಟುಕೊಂಡು ಕೆಲಸ ಮಾಡುತ್ತಿರುವ ಅಖಿಲ ಭಾರತ ಮಟ್ಟದ ಮಹಿಳಾ ಸಂಘಟನೆ ’ರಾಷ್ಟ್ರ ಸೇವಿಕಾ ಸಮಿತಿ’. ಇದನ್ನು ಸ್ಥಾಪಿಸಿದವರು ವಂದನೀಯ ಲಕ್ಷ್ಮೀಬಾಯಿ ಕೇಳ್ಕರ್ (ಪ್ರೀತಿಯಿಂದ ಮೌಶೀಜೀ ಎಂದೇ ಕರೆಯಲ್ಪಡುತ್ತಾರೆ). ಪ್ರಖರವಾದ ದೇಶಭಕ್ತಿ ಇವರಿಗೆ ತಾಯಿಯಿಂದಲೇ ಬಂದ ಬಳುವಳಿ. ಜನಿಸಿದ್ದು ಸಾಮಾನ್ಯ ಕುಟುಂಬದಲ್ಲಾದರೂ ಚಿಂತನೆ ಮಾತ್ರ ಉನ್ನತ ಮಟ್ಟದ್ದು.

READ ALSO

Reaching the Unreached : Vanavasi Kalyana Karnataka’s seva to tribal community during #Covid19 lockdown

Applications invited for TAPAS and SAADHANA projects

ಸ್ತ್ರೀ ಮತ್ತು ಪುರುಷರು ರಥದ ಎರಡು ಗಾಲಿಗಳು ಎಂದು ಎಂದು ಸಾಮಾನ್ಯರೆಲ್ಲಾ ಭಾವಿಸುತ್ತಿದ್ದಾಗ, ಸ್ತ್ರೀ ರಾಷ್ಟ್ರದ ಸಾರಥಿ, ಆಕೆ ರಾಷ್ಟ್ರದ ಆಧಾರಶಕ್ತಿ ಎಂಬ ಪೂರ್ಣ ವಿಶ್ವಾಸ ಅವರದ್ದಾಗಿತ್ತು. ವೈವಾಹಿಕ ಜೀವನದ ತಾರುಣ್ಯದಲ್ಲೇ ವೈಧವ್ಯವೂ ಪ್ರಾಪ್ತಿಯಾಯಿತು. ಮನೆಯಲ್ಲಿ ೭ ಮಕ್ಕಳ ಜವಾಬ್ದಾರಿ ಹಾಗೂ ವೈಧವ್ಯ. ಈ ಪರಿಸ್ಥಿತಿಯಲ್ಲೂ ರಾಷ್ಟ್ರದ ಆಗಿನ ಪರಿಸ್ಥಿತಿ ಅವರ ಮನಸ್ಸನ್ನು ಗೊಂದಲಕ್ಕೀಡು ಮಾಡುತ್ತಿತ್ತು. ಭಾರತದ ಪ್ರಗತಿಗೆ ಹಿಂದೂ ಮಹಿಳೆಯರ ಹಿಂದೂ ಮಹಿಳೆಯರ ಸಂಘಟನೆಯೇ ಸೂಕ್ತವಾದ ಉತ್ತರ ಎಂಬುದನ್ನು ಮನಗಂಡು ಸಂಘಸ್ಥಾಪಕ ಪ. ಪೂ. ಡಾಕ್ಕರ್‌ಜೀಯವರ ಸಲಹೆ, ಮಾರ್ಗದರ್ಶನದ ಮೇರೆಗೆ ೧೯೩೬ರ ವಿಜಯದಶಮಿಯಂದು ನಾಗಪುರದ ವಾರ್ಧಾದಲ್ಲಿ ಸಮಿತಿಯನ್ನು ಪ್ರಾರಂಭಿಸಿದರು. ಸ್ತ್ರೀಯ ಜೀವನಕ್ಕೆ ಪ್ರೇರಣಾಸ್ರೋತವಾಗಬಲ್ಲ ದೇವಿ ಅಷ್ಟಭುಜೆ, ಕರ್ತೃತ್ವಕ್ಕೆ ದೇವಿ ಅಹಲ್ಯಾಬಾಯಿ ಹೋಳ್ಕರ್, ಮಾತೃತ್ವಕ್ಕೆ ಜೀಜಾಬಾಯಿ ಹಾಗೂ ನೇತೃತ್ವಕ್ಕೆ ಝಾನ್ಸಿರಾಣಿ ಲಕ್ಷ್ಮೀಬಾಯಿಯರನ್ನು ಸಮಿತಿಯ ಸೇವಿಕೆಯರೆದುರು ಆದರ್ಶವಾಗಿರಿಸಿದರು.
ಮೌಶೀಜೀ ಅಂದು ಇಟ್ಟ ಒಂದು ದಿಟ್ಟ ಹೆಜ್ಜೆ ಇಂದು ದೇಶದಲ್ಲಷ್ಟೇ ಅಲ್ಲ, ವಿದೇಶಗಳಲ್ಲೂ ಶಾಖೆಗಳನ್ನು ಹೊಂದಿದೆ. ಸಮಿತಿ ಈ ಮಟ್ಟಕ್ಕೆ ತಲುಪಲು ಕಾರಣವಾದ ಅಪೂರ್ವ ಸಾಧನವೇ ದೈನಂದಿನ ಅಥವಾ ಸಾಪ್ತಾಹಿಕ ಶಾಖೆ. ಒಂದು ಗಂಟೆಯ ಈ ಅವಧಿಯಲ್ಲಿ ದೇಶಭಕ್ತಿಗೀತೆ ಸುಭಾಷಿತ, ಕಥೆ, ಯೋಗಾಸನ ಮತ್ತು ಬುದ್ಧಿ ಶರೀರಕ್ಕೆ ಕಸರತ್ತು ನೀಡುವ ಆಟಗಳಿರುತ್ತವೆ. ಹೀಗೆ ನಮ್ಮ ಅರಿವಿಗೆ ಬರದೇ ಹೃದಯ ಹೃದಯಗಳನ್ನು ಜೋಡಿಸುವ ಕೆಲಸ ಶಾಖೆಯಲ್ಲಿ ನಡೆಯುತ್ತದೆ. ಇಲ್ಲಿ ತಯಾರಾದ ಸೇವಿಕೆಯರು ಸಮಾಜದ ಅನ್ಯಾನ್ಯ ಕಾರ್ಯಗಳಲ್ಲಿ ಜೋಡಿಸಿಕೊಳ್ಳುತ್ತಾರೆ. ಈಗ ದೇಶದಲ್ಲಿ ಸಮಿತಿಯ ಕಾರ್ಯಕ್ಕೆ ಜೀವನವನ್ನು ಮುಡಿಪಾಗಿಟ್ಟ ಸುಮಾರು ೫೦ ಪ್ರಚಾರಿಕೆಯರಿದ್ದಾರೆ.  ದೇಶಾದ್ಯಂತ ಸಾವಿರಾರು ಶಾಖೆಗಳಿವೆ. ಕೇವಲ ದಕ್ಷಿಣ ಕರ್ನಾಟಕ ಪ್ರಾಂತದಲ್ಲಿ ೨೧೦ ಶಾಖೆಗಳು ಹಾಗೂ ಸಂಸ್ಕಾರ ಕೇಂದ್ರಗಳಿವೆ. ಶಾಖೆಗಳನ್ನು ಮೂಲ ವಾಗಿಟ್ಟುಕೊಂಡು ಸಮಿತಿಯು ಹಲವಾರು ರಚನಾತ್ಮಕ ಕೆಲಸಗಳನ್ನು ನಡೆಸುತ್ತದೆ.
ಮುಂಬೈಯಲ್ಲಿ ಗೃಹಿಣೀ ವಿದ್ಯಾಲಯ : ಕಡಿಮೆ ವಿದ್ಯಾಭ್ಯಾಸ ಹೊಂದಿರುವ ಗೃಹಿಣಿಯರನ್ನು ಗಮನದಲ್ಲಿಟ್ಟು ಪಠ್ಯಕ್ರಮವನ್ನು ರಚಿಸಿ ಸ್ತ್ರೀಯರು ಉತ್ತಮ ಗೃಹಿಣಿಯರಾಗಲು ಬೇಕಾಗುವ ಶಿಕ್ಷಣ ನೀಡಲಾಗುತ್ತದೆ. ನಾಸಿಕದ ರಾಣಿ ಲಕ್ಷ್ಮೀಭವನದಲ್ಲಿ ಕೈಕೆಲಸದ ತರಗತಿಗಳು, ಉದ್ಯೋಗ ಮಂದಿರ, ಬಾಲಕ ಮಂದಿರ, ಸಾಂಸ್ಕೃತಿಕ ವರ್ಗಗಳನ್ನು ನಡೆಸಲಾಗುತ್ತದೆ.
ನಾಗಪುರದಲ್ಲಿ ದೇವಿ ಅಹಲ್ಯಾಮಂದಿರ :  ಇಲ್ಲಿ ಒಂದು ಶಿಶುವಿಹಾರ, ಹುಡುಗಿಯರ ವಸತಿಗೃಹ, ವಾಚನಾಲಯವಿದೆ. ಗುಜರಾತ್‌ನಲ್ಲಿ ಬಡವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪುಸ್ತಕಗಳು ಹಾಗೂ ಶುಲ್ಕವನ್ನು ನೀಡಲಾಗುತ್ತಿದೆ. ನಾಗಪುರದಲ್ಲಿ ಶಕ್ತಿಪೀಠದಲ್ಲಿ ಉಚಿತ ಆರೋಗ್ಯ ಕೇಂದ್ರ ಮತ್ತು ಉದ್ಯೋಗಮಂದಿರಗಳಿವೆ. ದಿಲ್ಲಿಯ ಕೊಳಚೆ ಪ್ರದೇಶಗಳಲ್ಲಿ ಶಿಶುವಿಹಾರ ಗಳನ್ನು ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹೊಲಿಗೆ ಹಾಗೂ ಕಂಪ್ಯೂಟರ್ ಶಿಕ್ಷಣವನ್ನು ಉಚಿತವಾಗಿ ನೀಡಿ ಅನಂತರ ಸ್ವ-ಉದ್ಯೋಗಕ್ಕೆ ಅವಶ್ಯಕವಿರುವ ಎಲ್ಲಾ ಸಹಕಾರ ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದವರ ಶಸ್ತ್ರ ಚಿಕಿತ್ಸೆಗಳಿಗೂ ನೆರವು ನೀಡಲಾಗುತ್ತದೆ. ನೆರೆ, ಭೂಕಂಪ, ಬರಗಾಲ ಮುಂತಾದ ಪ್ರಾಕೃತಿಕ ವಿಕೋಪಗಳ ಸಂಧರ್ಭಗಳಲ್ಲಿ ಗ್ರಾಮಗಳನ್ನು ದತ್ತು ಪಡೆದು ಮಾದರಿ ಗ್ರಾಮಗಳ ನಿರ್ಮಾಣ ನಡೆಯುತ್ತದೆ. ಬೆಂಗಳೂರಿನ ಶಾಲಾ ಕಾಲೇಜುಗಳಲ್ಲಿ ಪ್ರಾಂಶುಪಾಲರ ಅನುಮತಿ ಪಡೆದು ವಾರದಲ್ಲಿ ಒಂದು ಗಂಟೆಯಷ್ಟು ಕಾಲ ಹೆಣ್ಣು ಮಕ್ಕಳಿಗೆ ಲವ್ ಜಿಹಾದ್‌ನಂತಹ ಸಾಂಸ್ಕೃತಿಕ ದಾಳಿಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಸಮಿತಿಯಲ್ಲಿ ವರ್ಷಂಪ್ರತಿ ಗುರುಪೂಜೆ, ರಕ್ಷಾಬಂಧನ, ವಿಜಯದಶಮಿ, ಯುಗಾದಿ, ಸಂಕ್ರಾಂತಿ ಮುಂತಾದ ರಾಷ್ಟ್ರೀಯ ಉತ್ಸವಗಳನ್ನು ಆಚರಿಸಲಾಗುತ್ತದೆ. ಪ್ರತೀವರ್ಷ ದೇಶದ ಎಲ್ಲಾ ಪ್ರಾಂತಗಳಲ್ಲಿ ಏಪ್ರಿಲ್, ಮೇ ತಿಂಗಳಲ್ಲಿ ಪ್ರಥಮ ವರ್ಷ ಹಾಗೂ ದ್ವಿತೀಯ ವರ್ಷದ ಶಿಕ್ಷಾವರ್ಗಗಳು (೧೫ ದಿನ) ಹಾಗೂ ನಾಗಪುರದಲ್ಲಿ ತೃತೀಯ ವರ್ಷದ ಶಿಕ್ಷಾವರ್ಗವು ನಡೆಯುತ್ತದೆ. ಈ ಶಿಬಿರಗಳಲ್ಲಿ ೧೪ ವರ್ಷ ಮೇಲ್ಪಟ್ಟ ಹುಡುಗಿಯರು ಮಹಿಳೆಯರು ಭಾಗವಹಿಸಬಹುದು. ಇಲ್ಲಿ ರಾಷ್ಟ್ರ ಜಾಗೃತಿಗೆ ಪೂರಕವಾದ ಶಾರೀರಿಕ, ಬೌದ್ಧಿಕ ಶಿಕ್ಷಣ ನೀಡಲಾಗುತ್ತದೆ. ಹೀಗೆ ಸಮಿತಿಯ ಉತ್ಸವಗಳು, ಶಿಬಿರಗಳು ಹಾಗೂ ಇನ್ನಿತರ ಕಾರ್ಯಕ್ರಮ ಗಳಲ್ಲಿ ಭಾಗವಹಿಸುತ್ತಾ ಮಹಿಳೆಯರು ರಾಷ್ಟ್ರಕ್ಕೆ ತಾನೇನು ಕೊಡಬಲ್ಲೆ ಎಂಬುವುದರ ಬಗ್ಗೆ ಯೋಚಿಸಲಾರಂಭಿಸುತ್ತಾರೆ.
ವಿಳಾಸ : ರಾಷ್ಟ್ರಸೇವಿಕಾ ಸಮಿತಿ
’ಸುಕೃಪಾ’ # ೩೬೨೮, ೧೦ನೇ ಅಡ್ಡರಸ್ತೆ,
ಗಾಯತ್ರಿನಗರ, ಬೆಂಗಳೂರು – ೫೬೦ ೦೨೦
ದೂರವಾಣಿ : ೯೪೪೯೮ ೮೦೯೫೬

  • email
  • facebook
  • twitter
  • google+
  • WhatsApp

Related Posts

Reaching the Unreached : Vanavasi Kalyana Karnataka’s seva to tribal community during #Covid19 lockdown
Organisation Profiles

Reaching the Unreached : Vanavasi Kalyana Karnataka’s seva to tribal community during #Covid19 lockdown

January 7, 2021
Applications invited for TAPAS and SAADHANA projects
News Digest

Applications invited for TAPAS and SAADHANA projects

August 29, 2018
ಸಾಂಸ್ಕೃತಿಕ ರಾಯಭಾರಿಗಳನ್ನು ತಯಾರು ಮಾಡುವ ಗುರುಕುಲಗಳು ಹೆಚ್ಚಾಗಬೇಕಿದೆ: ವಿ. ನಾಗರಾಜ್‌
News Digest

ಸಾಂಸ್ಕೃತಿಕ ರಾಯಭಾರಿಗಳನ್ನು ತಯಾರು ಮಾಡುವ ಗುರುಕುಲಗಳು ಹೆಚ್ಚಾಗಬೇಕಿದೆ: ವಿ. ನಾಗರಾಜ್‌

August 19, 2018
VANAVASI KALYAN ASHRAMA – ವನವಾಸಿ ಕಲ್ಯಾಣ ಆಶ್ರಮ
Organisation Profiles

VANAVASI KALYAN ASHRAMA – ವನವಾಸಿ ಕಲ್ಯಾಣ ಆಶ್ರಮ

April 11, 2011
Organisation Profiles

KRUSHI PRAYOG PARIVAR – ಕೃಷಿ ಪ್ರಯೋಗ ಪರಿವಾರ

April 11, 2011
VISHWA HINDU PARISHAD – ವಿಶ್ವ ಹಿಂದು ಪರಿಷತ್
Organisation Profiles

VISHWA HINDU PARISHAD – ವಿಶ್ವ ಹಿಂದು ಪರಿಷತ್

April 1, 2011
Next Post
SAKSHAMA- ಸಮದೃಷ್ಟಿ, ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ, ಕರ್ನಾಟಕ

SAKSHAMA- ಸಮದೃಷ್ಟಿ, ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ, ಕರ್ನಾಟಕ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011
Remembering RSS Founder Dr KB Hedgewar on his 123th Birthday on Yugadi

Remembering RSS Founder Dr KB Hedgewar on his 123th Birthday on Yugadi

December 9, 2013

EDITOR'S PICK

ತಿಳಿಯಲೇಬೇಕಾದ ಮಾಣಿಕ್ಯ – ಶಾಹಜಿ ರಾಜೆ ಭೋಂಸ್ಲೆ

January 23, 2022
WATCH LIVE: RSS Sarasanghachalak Mohan Bhagwat’s VIJAYA DASHAMI speech will be LIVE onSamvada.org on Oct 3rd, Friday 7.30am

Live: Vijayadashami address by Ma. Sarasanghchalak Dr Mohan Bhagwat

October 3, 2014
राष्ट्र सेविका समिति के प्रबुद्ध वर्ग: शिक्षकों से चाणक्य के अनुसरण का आह्वान

राष्ट्र सेविका समिति के प्रबुद्ध वर्ग: शिक्षकों से चाणक्य के अनुसरण का आह्वान

January 29, 2015
RSS ABPS Resolution-1:Address the concerns of the persecuted Hindus of Bangladesh and Pakistan

RSS ABPS: प्रस्ताव-1: बंगलादेश और पाकिस्तान के उत्पीड़ित हिन्दुओं की समस्याओं का निराकरण करें

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In