ಉತ್ತರ ಕನ್ನಡ ಜಿಲ್ಲೆಯ ಬಿಜೆಪಿಯ ಹಿರಿಯ ಧುರೀಣರು, ಕುಮಟಾ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಅಕ್ಟೊಬರ್ ೧೮ರಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ. ಕರ್ಕಿ ಅವರನ್ನು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಡಾ. ಕರ್ಕಿಯವರು 1968 ರಿಂದ ಜನಸಂಘದ ಮೂಲಕ ರಾಜಕೀಯಕ್ಕೆ ಕಾಲಿಟ್ಟರು. 1983ರಲ್ಲಿ ಮತ್ತು 1994ರಲ್ಲಿ ಕುಮಟಾ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಡಾ.ಎಂ.ಪಿ.ಕರ್ಕಿ ನಿಧನಕ್ಕೆ ಆರೆಸ್ಸೆಸ್ ತೀವ್ರ […]