ಬೆಂಗಳೂರು: ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯ ಇತ್ತೀಚಿನ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸತ್ಯಶೋಧನೆ ನಡೆಸಿದ್ದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀಕಾಂತ್ ಡಿ ಬಬಲಾದಿ ನೇತೃತ್ವದ ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ. “ಗಲಭೆಗಳನ್ನು ಮೊದಲೇ ಯೋಜಿಸಲಾಗಿತ್ತು, ಸಂಘಟಿಸಲಾಗಿತ್ತು ಮತ್ತು ಜನಸಮೂಹವು ಈ ಪ್ರದೇಶದ ಕೆಲವು ಪ್ರಮುಖ ಹಿಂದೂಗಳನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದೊಂಬಿ ನಡೆಸಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. […]