06ಜುಲೈ 2018, ಬೆಂಗಳೂರು: ಹಿರಿಯ ಸ್ವಯಂಸೇವಕರಾದ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರವಹಿಸಿದ್ದ ಹಿರಿಯ ಜೀವಿ, ರಾಷ್ಟ್ರ‍ೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾದ ಸುಬ್ರಾಯ ಭಟ್ ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಮೂರ್ನಾಲ್ಕು ದಿನಗಳ ಹಿಂದೆ ತಮ್ಮ ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡ ಇವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ವಯಸ್ಸಿನ ಕಾರಣದಿಂದ ಶಸ್ತ್ರ ಚಿಕಿತ್ಸೆ ಮಾಡಲಾಗದೇ ಮನೆಗೆ ಕರೆತಂದು ಆರೈಕೆ ಮಾಡಲಾಗುತ್ತಿತ್ತು. ಇಂದು ಉಸಿರಾಟದ ತೊಂದರೆಯಿಂದಾಗಿ ನಮ್ಮನ್ನು ಅಗಲಿದರು. ಅವರಿಗೆ ೯೪ ವರ್ಷ ವಯಸ್ಸಾಗಿತ್ತು. […]