ಮೇ ೩, ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆರೆಸ್ಸೆಸ್ ನಡೆಸಿದ ಸಮೀಕ್ಷೆಯ ಪ್ರಕಾರ ಬಿಜೆಪಿ ಸೋಲಲಿದೆ ಎಂದು ‘ಕನ್ನಡ ಪ್ರಭ’ ಪತ್ರಿಕೆಯಲ್ಲಿ ವರದಿಯಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾಗಿದೆ ಎಂದು ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳನ್ನೊಳಗೊಂಡ ಆರೆಸ್ಸೆಸ್ಸಿನ ದಕ್ಷಿಣ ಮಧ್ಯ ಕ್ಷೇತ್ರದ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಸ್ಪಷ್ಟಪಡಿಸಿದ್ದಾರೆ. ಆರೆಸ್ಸೆಸ್ ಇಂತಹ ಯಾವುದೇ ಸಮೀಕ್ಷೆಯನ್ನು ಮಾಡಿಲ್ಲ ಹಾಗೂ ಈ ತರಹದ […]